ಭಾನುವಾರ, ಏಪ್ರಿಲ್ 2, 2023
23 °C

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ. ಉಷಾ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದಿಗ್ಗಜ ಅಥ್ಲೀಟ್‌ ಪಿ.ಟಿ. ಉಷಾ ಅವರು ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ಪಿ.ಟಿ. ಉಷಾ, 1984ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನ 400 ಮೀ. ಹರ್ಡಲ್ಸ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. ಎರಡು ದಶಕಗಳ ಕಾಲ ಭಾರತ ಮತ್ತು ಏಷ್ಯಾ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ್ದ ಅವರು 2000ನೇ ಇಸ್ವಿಯಲ್ಲಿ ಹಲವು ಪದಕಗಳೊಂದಿಗೆ ನಿವೃತ್ತರಾಗಿದ್ದರು.

ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಿವೃತ್ತ ನ್ಯಾಯಮೂರ್ತಿ ಎಲ್. ನಾಗೇಶ್ವರ್ ರಾವ್ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆಯಿತು. 58 ವರ್ಷದ ಪಿ.ಟಿ. ಉಷಾ ಅವಿರೋಧವಾಗಿ ಐಒಎ ಅಧ್ಯಕ್ಷೆಯಾಗಿ ಆಯ್ಕೆಯಾದರು.

ಮಹಾರಾಜ ಯಾದವೀಂದ್ರ ಸಿಂಗ್ ಬಳಿಕ ಐಒಎ ಅಧ್ಯಕ್ಷ ಹುದ್ದೆ ವಹಿಸಿಕೊಂಡ ಮೊದಲ ಕ್ರೀಡಾಪಟು ಎಂಬ ಶ್ರೇಯವೂ ಉಷಾ ಅವರದು. 1938–1960ರ ಅವಧಿಯಲ್ಲಿ ಯಾದವೀಂದ್ರ ಸಿಂಗ್ ಅಧ್ಯಕ್ಷ ಸ್ಥಾನ ನಿಭಾಯಿಸಿದ್ದರು. ಕ್ರಿಕೆಟಿಗರಾಗಿದ್ದ ಅವರು 1934ರಲ್ಲಿ ಟೆಸ್ಟ್ ಪಂದ್ಯವೊಂದನ್ನು ಆಡಿದ್ದರು.

‘ಪಯ್ಯೋಳಿ ಎಕ್ಸ್‌ಪ್ರೆಸ್‌‘ ಖ್ಯಾತಿಯ ಕೇರಳದ ಉಷಾ ಅವರನ್ನು ಭಾರತೀಯ ಜನತಾ ಪಕ್ಷವು ಜುಲೈನಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು