ಶುಕ್ರವಾರ, ಜನವರಿ 28, 2022
25 °C
ಇಂಡೊನೇಷ್ಯಾ ಓಪನ್‌ ಸೂಪರ್‌ 1000 ಟೂರ್ನಿ ನಾಳೆಯಿಂದ

ಸಿಂಧು, ಶ್ರೀಕಾಂತ್‌ಗೆ ಸ್ಥಿರ ಸಾಮರ್ಥ್ಯ ಮುಂದುವರಿಸುವ ಛಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾಲಿ: ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಪಿ.ವಿ.ಸಿಂಧು ಮತ್ತು ಕಿದಂಬಿ ಶ್ರೀಕಾಂತ್‌ ಅವರು ಸ್ಥಿರ ಸಾಮರ್ಥ್ಯ ಮುಂದುವರಿಸುವ ಛಲದೊಂದಿಗೆ ಇಂಡೊನೇಷ್ಯಾ ಓಪನ್ ಸೂಪರ್ 1000 ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಇವರಿಬ್ಬರು ಇತ್ತೀಚೆಗೆ ಕೊನೆಗೊಂಡ ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 750 ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿದ್ದರು.

ಇಲ್ಲಿ ಮೂರನೇ ಶ್ರೇಯಾಂಕ ಪಡೆದಿರುವ ವಿಶ್ವ ಚಾಂಪಿಯನ್‌ ಆಟಗಾರ್ತಿ ಸಿಂಧು ಅವರು ಮಂಗಳವಾರ ಆರಂಭವಾಗು ಟೂರ್ನಿಯ ಮಹಿಳಾ ಸಿಂಗಲ್ಸ್‌ನ ಮೊದಲ ಹಣಾಹಣಿಯಲ್ಲಿ ಜಪಾನ್‌ನ ಆಯಾ ಒಹೊರಿ ಅವರನ್ನು ಎದುರಿಸಲಿದ್ದಾರೆ.

ವಿಶ್ವದ ಮಾಜಿ ಅಗ್ರಕ್ರಮಾಂಕದ ಆಟಗಾರ ಶ್ರೀಕಾಂತ್ ಕೂಡ ಹೈಲೊ ಓಪನ್ ಹಾಗೂ ಇಂಡೊನೇಷ್ಯಾ ಮಾಸ್ಟರ್ಸ್ ಟೂರ್ನಿಗಳಲ್ಲಿ ನಾಲ್ಕರ ಘಟ್ಟ ತಲುಪಿದ್ದರು. ಪ್ರಶಸ್ತಿ ಬರ ಎದುರಿಸುತ್ತಿರುವ ಅವರು ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತದವರೇ ಆದ ಎಚ್‌.ಎಸ್‌.ಪ್ರಣಯ್ ಅವರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್‌, ಬಿ. ಸಾಯಿ ಪ್ರಣೀತ್‌, ಪರುಪಳ್ಳಿ ಕಶ್ಯಪ್‌ ಕೂಡ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ–ಚಿರಾಗ್ ಶೆಟ್ಟಿ, ಉದಯೋನ್ಮುಖ ಆಟಗಾರರಾದ ಎಂ.ಆರ್‌.ಅರ್ಜುನ್‌–ಧೃವ ಕಪಿಲ ಕಣಕ್ಕಿಳಿಯಲಿದ್ದರೆ, ಕರ್ನಾಟಕದ ಅಶ್ವಿನಿ ಪೊನ್ನಪ್ಪ–ಎನ್‌.ಸಿಕ್ಕಿರೆಡ್ಡಿ ಮಹಿಳಾ ಡಬಲ್ಸ್‌ನಲ್ಲಿ ಆಡಲಿದ್ದಾರೆ.

ಅಶ್ವಿನಿ– ಬಿ.ಸುಮೀತ್ ರೆಡ್ಡಿ, ಸಿಕ್ಕಿ– ಧೃವ ಕಪಿಲ ಮತ್ತು ಜೂಹಿ ದೇವಾಂಗಣ್‌– ವೆಂಕಟ್‌ ಗೌರವ್‌ ಪ್ರಸಾದ್‌ ಮಿಶ್ರ ಡಬಲ್ಸ್‌ನಲ್ಲಿ ಜೋಡಿಯಾಗಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು