ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮನ್‌ವೆಲ್ತ್ ಕ್ರೀಡಾಕೂಟ: ರಾಷ್ಟ್ರ ಧ್ವಜ ಹಿಡಿದು ತಂಡ ಮುನ್ನಡೆಸಲಿದ್ದಾರೆ ಸಿಂಧು

Last Updated 27 ಜುಲೈ 2022, 14:56 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಂ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರು ಗುರುವಾರ ಆರಂಭವಾಗಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

‘ಸಿಂಧು ಅವರು ರಾಷ್ಟ್ರಧ್ವಜ ಹಿಡಿದುಕೊಂಡು ಉದ್ಘಾಟನಾ ಸಮಾರಂಭದಲ್ಲಿ ಭಾರತದ ಕ್ರೀಡಾಪಟುಗಳ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ 164 ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ. ಒಟ್ಟು 215 ಕ್ರೀಡಾಪಟುಗಳು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಂಧು ಅವರು ಭಾರತದ ಪರ ಚಿನ್ನದ ಪದಕ ಗೆಲ್ಲುವ ನೆಚ್ಚಿನ ಕ್ರೀಡಾಪಟುವಾಗಿದ್ದಾರೆ. ಕಳೆದ ಎರಡು ಆವೃತ್ತಿಯಲ್ಲಿ ಬೆಳ್ಳಿ (ಗೋಲ್ಡ್‌ ಕೋಸ್ಟ್‌ನಲ್ಲಿ) ಹಾಗೂ ಕಂಚಿನ ಪದಕ (ಗ್ಲಾಸ್ಗೊ) ಜಯಿಸಿದ್ದಾರೆ.

2018ರಲ್ಲಿ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿಯೂ ಸಿಂಧು ಅವರು ಭಾರತ ಕ್ರೀಡಾಪಟುಗಳ ತಂಡವನ್ನು ಮುನ್ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT