ಟೋಕಿಯೊ: ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ, ಭಾರತದ ಪಿ.ವಿ.ಸಿಂಧು ಅವರು ಒಲಿಂಪಿಕ್ಸ್‌ನ ಮೊದಲ ಪಂದ್ಯದಲ್ಲಿ ಇಸ್ರೇಲ್‌ನ ಪೊಲಿಕಾರ್ಪವ್ ಸೆನಿಯಾ ಅವರನ್ನು ಎದುರಿಸುವರು.
ಬ್ಯಾಡ್ಮಿಂಟನ್ ಸ್ಪರ್ಧೆಗಳ ಎರಡು ದಿನಗಳ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ‘ಜೆ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಸಿಂಧು ಜುಲೈ 25ರಂದು ತಮ್ಮ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
2016ರ ರಿಯೊ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಸಿಂಧು ಅವರು ಸ್ಪೇನ್‌ನ ಕರೋಲಿನಾ ಮರಿನ್ ಅವರಿಗೆ ಸೋತು ಬೆಳ್ಳಿ ಪದಕ ಗಳಿಸಿದ್ದರು.
ವಿಶ್ವ ರ‍್ಯಾಂಕಿಂಗ್‌ನಲ್ಲಿ ಸಿಂಧು ಸದ್ಯ ಏಳನೇ ಸ್ಥಾನದಲ್ಲಿದ್ದರೆ, ಪೊಲಿಕಾರ್ಪವ್ ಸ್ಥಾನ 58ನೆಯದು.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಬಿ.ಸಾಯಿ ಪ್ರಣೀತ್ ಅವರು ಮೊದಲ ಸುತ್ತಿನಲ್ಲಿ ಇಸ್ರೇಲ್‌ನ ಮಿಶಾ ಜಿಲ್‌ಬರ್ಮನ್ ಅವರಿಗೆ ಮುಖಾಮುಖಿಯಾಗುವರು. ‘ಡಿ‘ ಗುಂಪಿನ ಈ ಪಂದ್ಯ ಜುಲೈ 24ರಂದು ನಡೆಯಲಿದೆ.
ವಿಶ್ವ ರ‍್ಯಾಂಕಿಂಗ್‌ನಲ್ಲಿ 10ನೇ ಸ್ಥಾನದಲ್ಲಿರುವ ಭಾರತದ ಡಬಲ್ಸ್ ವಿಭಾಗದ ಜೋಡಿ ಸಾತ್ವಿಕ್‌ಸಾಯಿರಾಜ್ ರಣಕಿ ರೆಡ್ಡಿ– ಚಿರಾಗ್ ಶೆಟ್ಟಿ ಅವರು ಚೀನಾ ತೈಪೇಯ ಲೀ ಯಾಂಗ್ ಮತ್ತು ವಾಂಗ್ ಚಿ ಲಿನ್ ಅವರನ್ನು ಎದುರಿಸುವರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.