ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತಾರ್ ಅಥ್ಲೀಟ್ ಅಬ್ದಲೇಲ ಅಪಘಾತದಲ್ಲಿ ಸಾವು

Last Updated 26 ಜೂನ್ 2021, 12:43 IST
ಅಕ್ಷರ ಗಾತ್ರ

ದೋಹ: ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದ ಕತಾರ್‌ನ ಓಟಗಾರ ಅಬ್ದಲೇಲ ಹಾರೋನ್ (24) ಅ‍ಪಘಾತದಲ್ಲಿ ಶನಿವಾರ ಸಾವಿಗೀಡಾಗಿದ್ದಾರೆ ಎಂದು ಕತಾರ್ ಅಥ್ಲೆಟಿಕ್ ಫೆಡರೇಷನ್ ತಿಳಿಸಿದೆ.

2017ರ ವಿಶ್ವ ಚಾಂಪಿಯನ್‌ಷಿಪ್‌ನ 400 ಮೀಟರ್ಸ್ ಓಟದಲ್ಲಿ ಅವರು ‍ಪದಕ ಗಳಿಸಿದ್ದರು. ದಕ್ಷಿಣ ಆಫ್ರಿಕಾದ ವಾಯ್ಡೆ ವ್ಯಾನ್ ನೀಕರ್ಕ್‌ ಮತ್ತು ಬಹಾಮಾಸ್‌ನ ಸ್ಟೀವನ್ ಗಾರ್ಡಿನರ್ ಅವರೊಂದಿಗೆ ಸ್ಪರ್ಧಿಸಿದ್ದ ಹಾರೋನ್‌ 44.48 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು.

ಟೋಕಿಯೊ ಒಲಿಂಪಿಕ್ಸ್‌ ಅರ್ಹತೆಗಾಗಿ ನಡೆದಿದ್ದ ತಯಾರಿ ವೇಳೆ ಗಾಯಗೊಂಡಿದ್ದ ಅವರು ಚೇತರಿಸಿಕೊಳ್ಳುತ್ತಿದ್ದರು. ಆದರೆ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಸಾ ಅಲ್ ಫದಾಲ ತಿಳಿಸಿದ್ದಾರೆ.

ಸುಡಾನ್ ಸಂಜಾತ ಹಾರೋನ್ ಸಣ್ಣ ವಯಸ್ಸಿನಲ್ಲೇ 400 ಮೀಟರ್ಸ್ ಓಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದರು. 2015ರಲ್ಲಿ ಮೊದಲ ಬಾರಿ ದೇಶವನ್ನು ಪ್ರತಿನಿಧಿಸಿದ್ದರು. ಪೋರ್ಟ್‌ಲ್ಯಾಂಡ್‌ನಲ್ಲಿ 2016ರಲ್ಲಿ ನಡೆದಿದ್ದ ವಿಶ್ವ ಒಳಾಂಗಣ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಗೆದ್ದಿದ್ದ ಅವರು 2018ರಲ್ಲಿ ಜಕಾರ್ತದಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT