ಪ್ಯಾರಾ ಏಷ್ಯನ್‌ ಗೇಮ್ಸ್‌ಗೆ ರೇವತಿ ನಾಯಕ ಆಯ್ಕೆ

7

ಪ್ಯಾರಾ ಏಷ್ಯನ್‌ ಗೇಮ್ಸ್‌ಗೆ ರೇವತಿ ನಾಯಕ ಆಯ್ಕೆ

Published:
Updated:
Deccan Herald

ದಾವಣಗೆರೆ: ನಗರದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ಅಂತರರಾಷ್ಟ್ರೀಯ ಈಜುಪಟು ರೇವತಿ ನಾಯಕ ಎಂ. ಅವರು ಇಂಡೋನೇಷ್ಯಾದಲ್ಲಿನ ಜಕಾರ್ತದಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್‌ ಗೇಮ್ಸ್‌ಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್‌ 7ರಿಂದ 12ರವರೆಗೆ ನಡೆಯಲಿರುವ ಎಂಟು ಸ್ಪರ್ಧೆಗಳಲ್ಲಿ ರೇವತಿ ನಾಯಕ ಭಾಗವಹಿಸಲಿದ್ದಾರೆ. ರಿಲೆ ಸ್ಪರ್ಧೆಯಲ್ಲಿ ಎರಡು ತಂಡಗಳಲ್ಲಿ ಹಾಗೂ ಆರು ವೈಯಕ್ತಿಕ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ರೇವತಿ ನಾಯಕ ಅವರು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್‌ ಅವರ ಪುತ್ರಿ. 

ಕ್ರೀಡಾಕೂಟದಲ್ಲಿ ಯಶಸ್ವಿಯಾಗಿ ಭಾರತಕ್ಕೆ ಹೆಸರು ತರಲಿ ಎಂದು ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಶುಭ ಹಾರೈಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !