ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

246 ಕ್ರೀಡಾ ಸಾಧಕರಿಗೆ ಎಸ್‌ಎಐ ಪ್ರಶಸ್ತಿ

Last Updated 17 ನವೆಂಬರ್ 2021, 13:51 IST
ಅಕ್ಷರ ಗಾತ್ರ

ನವದೆಹಲಿ: ಇದೇ ಮೊದಲ ಬಾರಿಗೆ ಭಾರತ ಕ್ರೀಡಾ ಪ್ರಾಧಿಕಾರವು 246 ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿತು.

ಬುಧವಾರ 162 ಅಥ್ಲೀಟ್‌ಗಳು ಮತ್ತು 84 ಕೋಚ್‌ಗಳಿಗೆ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಒಟ್ಟು ₹ 85.02 ಲಕ್ಷ ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಜರಿದ್ದ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ‘ಪುರಸ್ಕೃತರಿಗೆ ಅಭಿನಂದನೆಗಳು. ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಇನ್ನೂ ಹೆಚ್ಚು ಪ್ರಮಾಣದಲ್ಲಿ ವಿಸ್ತರಿಸಲಾಗುವುದು’ ಎಂದರು.

ರಾಷ್ಟ್ರಮಟ್ಟದಲ್ಲಿ ಸಾಧಕರಿಗೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ವಿಜೇತರಿಗೆ ವಿಶೇಷ ಬ್ಲೇಜರ್‌ಗಳು, ಸ್ಮರಣಿಕೆಗಳನ್ನು ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT