ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಕ್ರೀಡಾಪಟುಗಳಿಗೆ ಸಾಯ್‌, ಐಒಎ ನೆರವು

Last Updated 8 ಮೇ 2021, 12:09 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಅಂತರರಾಷ್ಟ್ರೀಯ ಕ್ರೀಡಾಪಟುಗಳು ಮತ್ತು ಕೋಚ್‌ಗಳಿಗೆ ನೆರವಾಗಲು ಭಾರತ ಕ್ರೀಡಾ ಪ್ರಾಧಿಕಾರವು (ಸಾಯ್) ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಜೊತೆಗೂಡಿ ತಂಡವೊಂದನ್ನು ಕಟ್ಟಲು ಮುಂದಾಗಿದೆ.

ಶುಕ್ರವಾರ ರಚಿಸಲಾಗಿರುವ ತಂಡದಲ್ಲಿ ಸಾಯ್ ಮಹಾನಿರ್ದೇಶಕ ಸಂದೀಪ್ ಪ್ರಧಾನ್‌, ಐಒಎ ಅಧ್ಯಕ್ಷ ನರಿಂದರ್ ಬಾತ್ರಾ, ಮಹಾಕಾರ್ಯದರ್ಶಿ ರಾಜೀವ್ ಮೆಹ್ತಾ, ಭಾರತ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷೆ ದೀಪಾ ಮಲಿಕ್‌, ಕ್ರೀಡಾ ಸಚಿವಾಲಯದ ನಿರ್ದೇಶಕ ವಿಜಯ ಕುಮಾರ್‌, ಖೇಲೊ ಇಂಡಿಯಾ ಹಿರಿಯ ನಿರ್ದೇಶಕ ಸತ್ಯನಾರಾಯನ್ ಮೀನಾ, ಸಾಯ್ ಸಂಯೋಜಕಿ ರಾಧಿಕಾ ಶ್ರೀಮಾನ್‌, ಟಾರ್ಗೆಟ್ ಒಲಿಂಪಿಕ್‌ ಪೋಡಿಯಂ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ರಾಜಗೋಪಾಲನ್ ಇದ್ದಾರೆ.

ರಾಜ್ಯ ಮಟ್ಟದಲ್ಲಿ ಆಯೋಜಿಸುವ ಯೋಜನೆಗಳನ್ನು ಈ ಸಮಿತಿ ಜಾರಿಗೆ ತರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT