ಸೋಮವಾರ, ಜನವರಿ 17, 2022
19 °C
ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ: ಎಲೀಟ್‌ ಅಥ್ಲೀಟ್‌ಗಳ ಶಿಬಿರ ಅಬಾಧಿತ

ಬಾಗಿಲು ಮುಚ್ಚಲಿರುವ ಸಾಯ್‌ ತರಬೇತಿ ಕೇಂದ್ರಗಳು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕೋವಿಡ್‌ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌) ನಿರ್ಧರಿಸಿದೆ. ಆದರೆ ಎಲೀಟ್ ಅಥ್ಲೀಟ್‌ಗಳ ರಾಷ್ಟ್ರೀಯ ಶಿಬಿರಗಳು ಬಯೋಬಬಲ್‌ ವ್ಯವಸ್ಥೆಯಲ್ಲಿ ಮುಂದುವರಿಯಲಿವೆ.

ಪಟಿಯಾಲ ಮತ್ತು ಬೆಂಗಳೂರಿನಲ್ಲಿರುವಂತಹ ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳ ಮೇಲೆ (ಎನ್‌ಸಿಒಇ) ಈ ನಿರ್ಧಾರವು ಪರಿಣಾಮ ಬೀರುವುದಿಲ್ಲ, ಅಲ್ಲಿರುವ ಎಲೀಟ್‌ ಕ್ರೀಡಾಪಟುಗಳಿಗೆ ವಿವಿಧ ವಿಭಾಗಗಳಲ್ಲಿ ಶಿಬಿರಗಳು ಪ್ರಗತಿಯಲ್ಲಿವೆ.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ದೃಷ್ಟಿಯಿಂದ, ದೇಶದಾದ್ಯಂತ 67 ತರಬೇತಿ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಕ್ರೀಡಾಪಟುಗಳ ಸುರಕ್ಷತೆಗಾಗಿ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ವಿವಿಧ ರಾಜ್ಯಗಳು ನೀಡಿದ ನಿರ್ದೇಶನಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ‘ ಎಂದು ಸಾಯ್‌ ತಿಳಿಸಿದೆ.

ಹಲವು ತರಬೇತಿ ಕೇಂದ್ರಗಳಲ್ಲಿರುವ ಅಥ್ಲೀಟ್‌ಗಳಲ್ಲಿ ಕೋವಿಡ್‌ ಪ್ರಕರಣಗಳು ದೃಢಪಟ್ಟ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ತರಬೇತಿ ಕೇಂದ್ರಗಳನ್ನು ಪುನರಾರಂಭಿಸಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.