ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾನಿಯಾ ಮಿರ್ಜಾ-ಶೋಯಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು?

Last Updated 12 ನವೆಂಬರ್ 2022, 6:16 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು ಮೂಡಿತೇ? ಹೌದು ಹೀಗೊಂದು ವದಂತಿ ವ್ಯಾಪಕವಾಗಿ ಕೇಳಿ ಬರುತ್ತಿದೆ.

‘ಕಾನೂನು ತೊಡಕುಗಳನ್ನು ನಿವಾರಿಸಿಕೊಂಡು ಈ ದಂಪತಿ ಅಧಿಕೃತವಾಗಿ ವಿಚ್ಛೇದನ ಘೋಷಣೆ ಮಾಡಲಿದ್ದಾರೆ’ ಎಂದು ಪಾಕ್‌ನ ‘ಜಿಯೋನ್ಯೂಸ್’ ಸುದ್ದಿವಾಹಿನಿ ವರದಿ ಮಾಡಿದೆ.

ಆದರೆ, ಈ ಬಗ್ಗೆ ಸಾನಿಯಾ ಆಗಲಿ ಅಥವಾ ಶೋಯಬ್ ಆಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

‘ಸಾನಿಯಾ ಹಾಗೂ ಶೋಯಬ್ ದಾಂಪತ್ಯದಲ್ಲಿ ಈ ಹಿಂದೆ ಸಾಕಷ್ಟು ಸಾರಿ ಬಿರುಕು ಮೂಡಿತ್ತು. ಆದರೆ, ಅದು ವಿಚ್ಛೇದನ ತೆಗೆದುಕೊಳ್ಳುವ ಹಂತಕ್ಕೆ ಹೋಗಿರಲಿಲ್ಲ. ಇದೀಗ ವಿಚ್ಛೇದನ ದ ನಿರ್ಧಾರ ಮಾಡಿರುವ ದಂಪತಿ ಮಗುವನ್ನು ಸಹ ಪೋಷಕ (ಕೋ ಪೇರೆಂಟಿಂಗ್) ಪದ್ದತಿ ಅಡಿ ಬೆಳೆಸುವ ತೀರ್ಮಾನ ಮಾಡಿದ್ದಾರೆ’ ಎಂದು ಶೋಯಬ್ ಕಡೆಯ ಸಂಬಂಧಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆದಿದೆ. ಆದರೆ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದ ಸಾನಿಯಾ, ‘ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ’? ಎಂದು ವದಂತಿ ಎಬ್ಬಿಸುವವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಸಾನಿಯಾ ಮಿರ್ಜಾ ಹಾಗೂ ಶೋಯಬ್ ಮಲಿಕ್ 2010 ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ 2018 ರಲ್ಲಿ ಮಗುವಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಮಗನ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT