ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿ: ಸಾತ್ವಿಕ್‌–ಚಿರಾಗ್‌ ಚಾಂಪಿಯನ್‌

Last Updated 26 ಮಾರ್ಚ್ 2023, 11:24 IST
ಅಕ್ಷರ ಗಾತ್ರ

ಬಾಸೆಲ್‌ (ಪಿಟಿಐ): ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಸ್ವಿಸ್‌ ಓಪನ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಚಾಂಪಿಯನ್‌ ಆದರು.

ಭಾನುವಾರ ನಡೆದ ಪುರುಷರ ಡಬಲ್ಸ್‌ ವಿಭಾಗದ ಫೈನಲ್‌ನಲ್ಲಿ ಭಾರತದ ಜೋಡಿ 21–19, 24–22 ರಲ್ಲಿ ಚೀನಾದ ರೆನ್‌ ಕ್ಸಿಯಾನ್‌ ಯು– ತಾನ್‌ ಕ್ವಿಯಾಂಗ್‌ ವಿರುದ್ಧ ಗೆದ್ದಿತು.

ಇಲ್ಲಿ ಎರಡನೇ ಶ್ರೇಯಾಂಕ ಪಡೆದಿದ್ದ ಸಾತ್ವಿಕ್‌–ಚಿರಾಗ್‌ ಅವರು ಪ್ರಬಲ ಸ್ಮ್ಯಾಷ್‌ಗಳು ಮತ್ತು ಚುರುಕಿನ ರಿಟರ್ನ್‌ಗಳ ಮೂಲಕ ಎದುರಾಳಿಗಳ ಮೇಲೆ ಒತ್ತಡ ಹೇರಿ 54 ನಿಮಿಷಗಳಲ್ಲಿ ಗೆಲುವು ಒಲಿಸಿಕೊಂಡರು.

ಭಾರತದ ಆಟಗಾರರಿಗೆ ದೊರೆತ ಈ ಋತುವಿನ ಚೊಚ್ಚಲ ಪ್ರಶಸ್ತಿ ಇದಾಗಿದೆ. ಕಳೆದ ವಾರ ನಡೆದಿದ್ದ ಆಲ್‌ ಇಂಗ್ಲೆಂಡ್ ಓಪನ್‌ ಚಾಂಪಿಯನ್‌ಷಿಪ್‌ನಲ್ಲಿ ಎದುರಾಗಿದ್ದ ನಿರಾಶೆಯನ್ನು ಮರೆಸುವಲ್ಲಿ ಯಶಸ್ವಿಯಾದರು. ಅಲ್ಲಿ ಎರಡನೇ ಸುತ್ತಿನಲ್ಲಿ ಹೊರಬಿದ್ದಿದ್ದರು.

ಭಾರತದ ಜೋಡಿ ವಿಶ್ವ ಟೂರ್‌ನಲ್ಲಿ ಒಟ್ಟಾರೆಯಾಗಿ ಐದನೇ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಕಳೆದ ವರ್ಷ ಇಂಡಿಯನ್ ಓಪನ್‌ ಮತ್ತು ಫ್ರೆಂಚ್‌ ಓಪನ್‌ನಲ್ಲಿ ಚಾಂಪಿಯನ್‌ ಆಗಿತ್ತು. ಅದಕ್ಕೂ ಮುನ್ನ 2019 ರಲ್ಲಿ ಥಾಯ್ಲೆಂಡ್‌ ಓಪನ್ ಹಾಗೂ 2018 ರಲ್ಲಿ ಹೈದರಾಬಾದ್‌ ಓಪನ್‌ ಜಯಿಸಿತ್ತು.

ಸಾತ್ವಿಕ್‌ ಮತ್ತು ಚಿರಾಗ್‌ ಕಳೆದ ವರ್ಷ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT