ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಎಫ್‌ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಆಯ್ಕೆ

Last Updated 25 ಸೆಪ್ಟೆಂಬರ್ 2019, 13:51 IST
ಅಕ್ಷರ ಗಾತ್ರ

ದೋಹಾ: ಬ್ರಿಟನ್‌ನ ಸೆಬಾಸ್ಟಿಯನ್ ಕೋ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಷನ್‌ ಅಧ್ಯಕ್ಷರಾಗಿ (ಐಎಎಎಫ್‌) ಪುನರಾಯ್ಕೆಯಾಗಿದ್ದಾರೆ. ಬುಧವಾರ ಅವರನ್ನು ಅವಿರೋಧವಾಗಿ ಆರಿಸಲಾಯಿತು.

ಮಧ್ಯ ದೂರದ ಓಟಗಾರರಾಗಿದ್ದ ಸೆಬಾಸ್ಟಿಯನ್ ಒಲಿಂಪಿಕ್ಸ್ ಮತ್ತು ವಿಶ್ವ ಚಾಂಪಿಯನ್ ಆಗಿದ್ದರು.62 ವರ್ಷದ ಅವರು 2015ರಲ್ಲಿ ಮೊದಲ ಬಾರಿ ಐಎಎಎಫ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ದೋಹಾದಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಇರುವಾಗ ಅವರು ಮರು ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT