ಭಾನುವಾರ, ಜನವರಿ 19, 2020
27 °C

ಷಟಲ್ ಬ್ಯಾಡ್ಮಿಂಟನ್: ರಾಜ್ಯಮಟ್ಟಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ತಾಲ್ಲೂಕಿನ ಬ್ರಹ್ಮಣೀಪುರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಂ.ಕೆ.ಶಶಿಕುಮಾರ್ ಮತ್ತು ಮಾದಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪಾಪಣ್ಣ ಅವರು ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 45 ವರ್ಷ ಮೇಲ್ಪಟ್ಟವರ ವಿಭಾಗದ ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಡಬಲ್ಸ್ ವಿಭಾಗದಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಮನಗರದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಡಬಲ್ಸ್ ವಿಭಾಗದಲ್ಲಿ ಜಯ ಸಾಧಿಸಿ ಈ ಸಾಧನೆ ಮಾಡಿದ್ದಾರೆ. ಧಾರವಾಡದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಇವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಕೆ.ಬೈರಲಿಂಗಯ್ಯ, ತಾಲ್ಲೂಕು ಅಧ್ಯಕ್ಷ ಎಚ್.ಎಸ್. ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು