ಭಾನುವಾರ, ನವೆಂಬರ್ 27, 2022
20 °C

ವಿಶ್ವ ಯೂತ್‌ ಬಾಕ್ಸಿಂಗ್‌: ಏಳು ಬಾಕ್ಸರ್‌ಗಳು ಫೈನಲ್‌ಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿಶ್ವ ಯೂತ್‌ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಬಾಕ್ಸರ್‌ಗಳ ಉತ್ತಮ ಪ್ರದರ್ಶನ ಮುಂದುವರಿದಿದ್ದು, ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಒಟ್ಟು ಏಳು ಮಂದಿ ಫೈನಲ್‌ ಪ್ರವೇಶಿಸಿದ್ದಾರೆ.

ಸ್ಪೇನ್‌ನ ಲಾ ನೂಸಿಯಾದಲ್ಲಿ ನಡೆಯುತ್ತಿರುವ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ವಂಶಜ್‌, ವಿಶ್ವನಾಥ್‌ ಸುರೇಶ್ ಮತ್ತು ಆಶೀಶ್‌ ಅವರು ಪ್ರಶಸ್ತಿ ಸುತ್ತು ತಲುಪಿದರು.

ಮಹಿಳೆಯರ ವಿಭಾಗದಲ್ಲಿ ಕೀರ್ತಿ (+81 ಕೆ.ಜಿ), ಭಾವನಾ ಶರ್ಮಾ (48 ಕೆ.ಜಿ), ದೇವಿಕಾ ಘೋರ್ಪಡೆ (52 ಕೆ.ಜಿ) ಮತ್ತು ರವೀನಾ (63 ಕೆ.ಜಿ) ಅವರು ಫೈನಲ್‌ಗೆ ಲಗ್ಗೆಯಿಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು