ಡೈಮಂಡ್‌ ಲೀಗ್‌ನಲ್ಲಿ ಶಿವಪಾಲ್‌ ಕಣಕ್ಕೆ

ಭಾನುವಾರ, ಜೂನ್ 16, 2019
28 °C

ಡೈಮಂಡ್‌ ಲೀಗ್‌ನಲ್ಲಿ ಶಿವಪಾಲ್‌ ಕಣಕ್ಕೆ

Published:
Updated:

ನವದೆಹಲಿ: ಭಾರತದ ಜಾವೆಲಿನ್‌ ಥ್ರೋ ಸ್ಪರ್ಧಿ ಶಿವಪಾಲ್‌ ಸಿಂಗ್‌ ಅವರು ಮುಂಬರುವ ಡೈಮಂಡ್‌ ಲೀಗ್‌ ಅಥ್ಲೆಟಿಕ್ಸ್‌ನಲ್ಲಿ ಕಣಕ್ಕಿಳಿಯಲಿದ್ದಾರೆ.

ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ (ಎಎಫ್‌ಐ) ಬುಧವಾರ ಈ ವಿಷಯ ತಿಳಿಸಿದೆ. ಡೈಮಂಡ್‌ ಲೀಗ್, ಜೂನ್ 13ರಿಂದ ಓಸ್ಲೊದಲ್ಲಿ ನಡೆಯಲಿದೆ.

23 ವರ್ಷ ವಯಸ್ಸಿನ ಶಿವಪಾಲ್‌ ಅವರು ಹೋದ ತಿಂಗಳು ದೋಹಾದಲ್ಲಿ ನಡೆದಿದ್ದ ಏಷ್ಯನ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿಯ ಪದಕ ಗೆದ್ದಿದ್ದರು. 86.23 ಮೀಟರ್ಸ್‌ ದೂರ ಜಾವೆಲಿನ್‌ ಎಸೆದು ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದರು. ಈ ಮೂಲಕ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಕತಾರ್‌ನಲ್ಲಿ ಆಯೋಜನೆಯಾಗಿರುವ ವಿಶ್ವ ಚಾಂಪಿಯನ್‌ಷಿಪ್‌ಗೆ ಅರ್ಹತೆ ಗಳಿಸಿದ್ದರು.

ಶಿವಪಾಲ್‌ ಅವರು ಇದೇ ಮೊದಲ ಸಲ ಡೈಮಂಡ್‌ ಲೀಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೋದ ವರ್ಷ ಜ್ಯೂರಿಚ್‌ನಲ್ಲಿ ನಿಗದಿಯಾಗಿದ್ದ ಲೀಗ್‌ನಲ್ಲಿ ಭಾಗವಹಿಸಿದ್ದ ನೀರಜ್‌ ಚೋಪ್ರಾ ನಾಲ್ಕನೇ ಸ್ಥಾನ ಗಳಿಸಿದ್ದರು. ಗಾಯದ ಕಾರಣ ನೀರಜ್‌ ಈ ಸಲ ಲೀಗ್‌ನಿಂದ ಹಿಂದೆ ಸರಿದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !