ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್ ಪಟು ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆ

Last Updated 4 ಅಕ್ಟೋಬರ್ 2020, 18:57 IST
ಅಕ್ಷರ ಗಾತ್ರ

ನವದೆಹಲಿ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದ ಶ್ರೇಯಸಿ ಸಿಂಗ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.

ಅವರು ಮುಂದೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಭವವಿದೆ. ಅವರ ತಂದೆ ದಿ. ದಿಗ್ವಿಜಯ ಸಿಂಗ್. ಎ.ಬಿ.ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು.

ಶ್ರೇಯಸಿ ಅವರು 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರು. 2018ರಲ್ಲಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT