ಬುಧವಾರ, ಸೆಪ್ಟೆಂಬರ್ 28, 2022
26 °C

CWG 2022| ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ನಲ್ಲಿ ಚಿನ್ನ ಗೆದ್ದ ಪಿ.ವಿ ಸಿಂಧು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬರ್ಮಿಂಗ್‌ಹ್ಯಾಂ: ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. 

ಮಹಿಳಾ ಸಿಂಗಲ್ಸ್​ ಬ್ಯಾಡ್ಮಿಂಟನ್​ ಫೈನಲ್​ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13 ನೇರ ಸೆಟ್​ಗಳಿಂದ ಸೋಲಿಸುವ ಮೂಲಕ ಸಿಂಧು ಚಿನ್ನದ ಪದಕ ತಮ್ಮದಾಗಿಸಿಕೊಂಡರು. 

ಇದರೊಂದಿಗೆ ಭಾರತ ಪ್ರತಿಷ್ಠಿತ ಕೂಟದಲ್ಲಿ ಈ ವರೆಗೆ 19 ಚಿನ್ನದ ಪದಕ ಗೆದ್ದಂತಾಗಿದೆ. ಇದಲ್ಲದೇ, 15 ಬೆಳ್ಳಿ, 22 ಕಂಚಿನ ಪದಗಳೂ ಸೇರಿದಂತೆ ಒಟ್ಟು 56 ಪದಗಳನ್ನು ಭಾರತ ಗೆದ್ದಿದೆ.  

ಭಾನುವಾರ ನಡೆದ ಸೆಮಿಫೈನಲ್‌ನಲ್ಲಿ ಅವರು ಸಿಂಗಪುರದ ಯೊ ಜಿಯಾ ಮಿನ್ ವಿರುದ್ಧ 21-19 21-17ರಿಂದ ಗೆಲುವು ದಾಖಲಿಸಿದ್ದರು. ಮಾಜಿ ವಿಶ್ವಚಾಂಪಿಯನ್ ಕೂಡ ಆಗಿರುವ ಸಿಂಧು, ಕಳೆದ ಎರಡು ಆವೃತ್ತಿಗಳಲ್ಲಿ ಒಂದು ಕಂಚು ಮತ್ತು ಬೆಳ್ಳಿ ಗೆದ್ದುಕೊಂಡಿದ್ದರು.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು