ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್‌: ಸೆಮಿಫೈನಲ್‌ಗೆ ಪಿ.ವಿ.ಸಿಂಧು ಲಗ್ಗೆ

ಆಕರ್ಷಿ ಕಶ್ಯಪ್‌ ಸವಾಲು ಅಂತ್ಯ
Last Updated 6 ಆಗಸ್ಟ್ 2022, 13:56 IST
ಅಕ್ಷರ ಗಾತ್ರ

ಬರ್ಮಿಂಗ್‌ಹ್ಯಾಮ್‌: ಸಿಂಗಲ್ಸ್ ವಿಭಾಗದಲ್ಲಿ ಚೊಚ್ಚಲ ಚಿನ್ನದ ಪದಕದ ನಿರೀಕ್ಷೆಯಲ್ಲಿರುವ ಭಾರತದ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ನಡೆದ ಕ್ವಾರ್ಟರ್‌ಫೈನಲ್ ಸೆಣಸಾಟದಲ್ಲಿ ಗೇಮ್‌ ಹಿನ್ನಡೆಯಿಂದ ಚೇತರಿಸಿಕೊಂಡ ಅವರು19-21, 21-14, 21-18ರಿಂದ ಮಲೇಷ್ಯಾದ ಗೊಹ್‌ ವೇ ಜಿನ್ ಅವರನ್ನು ಮಣಿಸಿದರು.

ಕಳೆದ ಎರಡು ಆವೃತ್ತಿಗಳಲ್ಲಿ ಒಂದು ಕಂಚು ಮತ್ತು ಬೆಳ್ಳಿ ಗೆದ್ದುಕೊಂಡಿರುವ, ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು ಇಲ್ಲಿ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದಾರೆ.

ಇದೇ ಮೊದಲ ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಡುತ್ತಿರುವ ಆಕರ್ಷಿ ಕಶ್ಯಪ್ ಅವರ ಅಭಿಯಾನ ಅಂತ್ಯವಾಯಿತು. ಎಂಟರಘಟ್ಟದ ಪಂದ್ಯದಲ್ಲಿ ಅವರು10-21, 7-21ರಿಂದ ಸ್ಕಾಟ್ಲೆಂಡ್‌ನ ಕ್ರಿಸ್ಟಿ ಗಿಲ್ಮರ್ ಎದುರು ಪರಾಭವಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT