ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ ಬ್ಯಾಡ್ಮಿಂಟನ್‌ ಟೂರ್ನಿ: ಸಿಂಧು ಫೈನಲ್‌ಗೆ

Last Updated 20 ಜುಲೈ 2019, 20:20 IST
ಅಕ್ಷರ ಗಾತ್ರ

ಜಕಾರ್ತ: ಭಾರತದ ಅಗ್ರಮಾನ್ಯ ಆಟಗಾರ್ತಿ ಪಿ.ವಿ.ಸಿಂಧು ಇಂಡೊನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ವಿಭಾಗದ ಫೈನಲ್ ಪ್ರವೇಶಿಸಿದರು. ಶನಿವಾರ ಇಲ್ಲಿ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ಅವರು ಚೀನಾದ ಚೆನ್ ಯೂಫಿ ವಿರುದ್ಧ 21–19, 21–10ರಲ್ಲಿ ಗೆದ್ದರು.

ಈ ಋತುವಿನ ಮೊದಲ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ ಸಿಂಧು ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿ ಸವಾಲನ್ನು ಎದುರಿಸುವರು. ಸಿಂಧು ಮತ್ತು ಯಮಗುಚಿ ಈವರೆಗೆ ಒಟ್ಟು 14 ಬಾರಿ ಸೆಣಸಿದ್ದು 10ರಲ್ಲಿ ಸಿಂಧು ಜಯಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT