ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಹಾಕಿ ತಂಡಕ್ಕೆ ದಕ್ಷಿಣ ಆಫ್ರಿಕಾದ ಕ್ರೆಗ್‌ ಫುಲ್ಟನ್‌ ಕೋಚ್

Last Updated 3 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರೆಗ್‌ ಫುಲ್ಟನ್‌ ಅವರು ಭಾರತ ಹಾಕಿ ತಂಡದ ನೂತನ ಕೋಚ್‌ ಆಗಿ ನೇಮಕಗೊಂಡಿದ್ದಾರೆ.

ಕೋಚ್‌ ಆಗಿ 25 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಫುಲ್ಟನ್‌ ಅವರು ಗ್ರಹಾಂ ರೀಡ್‌ ರಾಜೀನಾಮೆಯಿಂದ ತೆರವಾದ ಸ್ಥಾನ ತುಂಬಲಿದ್ದಾರೆ. ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡದ ನೀರಸ ಪ್ರದರ್ಶನದ ಬೆನ್ನಲ್ಲೇ ರೀಡ್‌, ಕೋಚ್‌ ಹುದ್ದೆ ತ್ಯಜಿಸಿದ್ದರು.

ಫುಲ್ಟನ್‌ ಅವರು ಐರ್ಲೆಂಡ್‌ ಮತ್ತು ಬೆಲ್ಜಿಯಂ ರಾಷ್ಟ್ರೀಯ ತಂಡಗಳಿಗೆ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು.

ದಕ್ಷಿಣ ಆಫ್ರಿಕಾ ಪರ ಅವರು 195 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 1996ರ ಅಟ್ಲಾಂಟ ಒಲಿಂಪಿಕ್ಸ್‌ ಮತ್ತು 2004ರ ಅಥೆನ್ಸ್‌ ಒಲಿಂಪಿಕ್ಸ್‌ನಲ್ಲಿ ಅವರು ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದರು.

‘ಭಾರತ ಪುರುಷರ ಹಾಕಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡದ್ದು ನನಗೆ ದೊರೆತ ಗೌರವ. ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿರುವ ಭಾರತ ತಂಡವನ್ನು ಯಶಸ್ಸಿನತ್ತ ಮುನ್ನಡೆಸುವುದು ನನ್ನ ಗುರಿ’ ಎಂದು ಫುಲ್ಟನ್‌ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT