ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಸನ್ಮಾನಿಸಿದರು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಇನ್ನಷ್ಟು ಸಾಧನೆ ಮಾಡಲು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಗರಿಷ್ಠ ಸಾಧನೆ ಮಾಡಿದ್ದು ಐದು ಚಿನ್ನ ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದುಕೊಂಡಿದೆ. ಶೂಟರ್ ಅವನಿ ಲೇಖರಾ ಒಂದು ಚಿನ್ನ ಮತ್ತು ಕಂಚಿನ ಪದಕ ಗೆದ್ದುಕೊಂಡಿದ್ದು ಸಿಂಘರಾಜ್ ಅಡಾನ ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿದ್ದಾರೆ. ಒಟ್ಟು 17 ಮಂದಿ ವಿವಿಧ ಕ್ರೀಡೆಗಳ ವಿವಿಧ ವಿಭಾಗಗಳಲ್ಲಿ ಚಾಂಪಿಯನ್ನರಾಗಿದ್ದಾರೆ.
‘ದೇಶಕ್ಕಾಗಿ ಪದಕ ಗೆಲ್ಲುವುದು ನನ್ನ ಬಹುದೊಡ್ಡ ಆಸೆಯಾಗಿತ್ತು. ಇದಕ್ಕಾಗಿ ಕಠಿಣ ಪರಿಶ್ರಮಪಟ್ಟಿದ್ದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದ್ದು ಅತ್ಯಂತ ಖುಷಿ ತಂದಿದೆ’ ಎಂದು ಅವನಿ ಲೇಖರಾ ಹೇಳಿದರು.
ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿತೀಶ್ ಪ್ರಮಾಣಿಕ್, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು, ಇಲಾಖೆಯ ಕಾರ್ಯದರ್ಶಿ ರವಿ ಮಿತ್ತಲ್, ಭಾರತ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕ ಸಂದೀಪ್ ಪ್ರಧಾನ್, ಭಾರತ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷೆ ದೀಪಾ ಮಲಿಕ್ ಮುಂತಾದವರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.