ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಯಾರಾಲಿಂಪಿಕ್ಸ್‌ ಸಾಧಕರಿಗೆ ಸನ್ಮಾನ

ಭಾರತದ ಮುಡಿಗೆ ಒಟ್ಟು 19 ಪದಕ l ಶೂಟರ್‌ ಲೇಖರಾಗೆ ಒಂದು ಚಿನ್ನ, ಒಂದು ಕಂಚು
Last Updated 8 ಸೆಪ್ಟೆಂಬರ್ 2021, 20:33 IST
ಅಕ್ಷರ ಗಾತ್ರ

ನವದೆಹಲಿ: ಟೋಕಿಯೊ
ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದ ಕ್ರೀಡಾಪಟುಗಳನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಸನ್ಮಾನಿಸಿದರು. ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಇನ್ನಷ್ಟು ಸಾಧನೆ ಮಾಡಲು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಗರಿಷ್ಠ ಸಾಧನೆ ಮಾಡಿದ್ದು ಐದು ಚಿನ್ನ ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದುಕೊಂಡಿದೆ. ಶೂಟರ್‌ ಅವನಿ ಲೇಖರಾ ಒಂದು ಚಿನ್ನ ಮತ್ತು ಕಂಚಿನ ಪದಕ ಗೆದ್ದುಕೊಂಡಿದ್ದು ಸಿಂಘರಾಜ್ ಅಡಾನ ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿದ್ದಾರೆ. ಒಟ್ಟು 17 ಮಂದಿ ವಿವಿಧ ಕ್ರೀಡೆಗಳ ವಿವಿಧ ವಿಭಾಗಗಳಲ್ಲಿ ಚಾಂಪಿಯನ್ನರಾಗಿದ್ದಾರೆ.

‘ದೇಶಕ್ಕಾಗಿ ಪದಕ ಗೆಲ್ಲುವುದು ನನ್ನ ಬಹುದೊಡ್ಡ ಆಸೆಯಾಗಿತ್ತು. ಇದಕ್ಕಾಗಿ ಕಠಿಣ ಪರಿಶ್ರಮಪಟ್ಟಿದ್ದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಸಾಧನೆ ಮಾಡಿದ್ದು ಅತ್ಯಂತ ಖುಷಿ ತಂದಿದೆ’ ಎಂದು ಅವನಿ ಲೇಖರಾ ಹೇಳಿದರು. ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಶಿತ್‌ ಪ್ರಮಾಣಿಕ್‌, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು, ಇಲಾಖೆಯ ಕಾರ್ಯದರ್ಶಿ ರವಿ ಮಿತ್ತಲ್‌,
ಭಾರತ ಕ್ರೀಡಾ ಪ್ರಾಧಿಕಾರದ ಮಹಾ
ನಿರ್ದೇಶಕ ಸಂದೀಪ್ ಪ್ರಧಾನ್‌, ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷೆ ದೀಪಾ ಮಲಿಕ್ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT