ಗುರುವಾರ , ಫೆಬ್ರವರಿ 25, 2021
28 °C

ಅಭ್ಯಾಸಕ್ಕೆ ಮರಳಿದ ಕಿದಂಬಿ ಶ್ರೀಕಾಂತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬ್ಯಾಂಕಾಕ್‌: ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ಕಿದಂಬಿ ಶ್ರೀಕಾಂತ್ ಅವರ ಕ್ವಾರಂಟೈನ್ ಅವಧಿಯನ್ನು ಒಂದು ವಾರಕ್ಕೆ ಕಡಿತಗೊಳಿಸಿದ್ದರಿಂದ ಅವರು ಭಾನುವಾರ ಅಭ್ಯಾಸಕ್ಕೆ ಮರಳಿದ್ದಾರೆ.

ಸಹ ಆಟಗಾರ ಬಿ.ಸಾಯಿ ಪ್ರಣೀತ್ ಅವರಿಗೆ ಕೋವಿಡ್–19 ದೃಢಪಟ್ಟ ಕಾರಣ ಅವರ ಜೊತೆ ರೂಮ್ ಹಂಚಿಕೊಂಡಿದ್ದ ಶ್ರೀಕಾಂತ್ ಅವರು ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿಯಬೇಕಾಯಿತು. ಅವರಿಗೆ 14 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು.

ಹೋದ ಸೋಮವಾರ ಶ್ರೀಕಾಂತ್ ಅವರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ’ನೆಗೆಟಿವ್‘ ಬಂದಿತ್ತು. ಭಾರತ ತಂಡದ ಎಲ್ಲ ಆಟಗಾರರಿಗೂ ಸೋಮವಾರ ಕಡ್ಡಾಯ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಬಿಎಐ ಸೂಚಿಸಿದೆ.

ಥಾಯ್ಲೆಂಡ್ ಓಪನ್ ಟೂರ್ನಿಯಿಂದ ಹಿಂದೆ ಸರಿಯುವ ಮೊದಲು, ಮೊದಲ ಸುತ್ತಿನಲ್ಲಿ ಶ್ರೀಕಾಂತ್‌ 21–11, 21–11ರಿಂದ ಥಾಯ್ಲೆಂಡ್‌ನ ಸಿಥ್ಥಿಕೋಮ್‌ ತಮಾಸಿನ್ ಅವರನ್ನು ಪರಾಭವಗೊಳಿಸಿದ್ದರು.

ಹೋದ ವಾರ ಕೊನೆಗೊಂಡಿದ್ದ ಮೊದಲ ಥಾಯ್ಲೆಂಡ್ ಓಪ‍ನ್‌ ಟೂರ್ನಿಯಲ್ಲಿ ಬಲಗಾಲಿನ ಮೀನಖಂಡದಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಶ್ರೀಕಾಂತ್ ಹಿಂದೆ ಸರಿದಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು