ಶನಿವಾರ, ಜನವರಿ 18, 2020
19 °C

18ರಿಂದ ರಾಜ್ಯ ಸೀನಿಯರ್‌ ಬಾಲ್‌ ಬ್ಯಾಡ್ಮಿಂಟನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಲ್‌ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಆಫ್‌ ಕರ್ನಾಟಕ (ಬಿಬಿಎಕೆ) ಮತ್ತು ಕೋಲಾರ ಜಿಲ್ಲಾ ಬಾಲ್‌ ಬ್ಯಾಡ್ಮಿಂಟನ್‌ ಸಂಸ್ಥೆಯ ಸಹಯೋಗದಲ್ಲಿ ಇದೇ ತಿಂಗಳ 18 ಮತ್ತು 19ರಂದು ಕೋಲಾರದಲ್ಲಿ ರಾಜ್ಯ ಸೀನಿಯರ್‌ ಪುರುಷರ ಮತ್ತು ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್‌ ಲೀಗ್‌ ಚಾಂಪಿಯನ್‌ಷಿಪ್‌ ನಡೆಯಲಿದೆ.

ಆಸಕ್ತ ತಂಡಗಳು ಇದೇ ತಿಂಗಳ 17ರಂದು ಸಂಜೆ 5ಗಂಟೆಯೊಳಗೆ ಕೋಲಾರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸಂಬಂಧಪಟ್ಟ ಸಿಬ್ಬಂದಿ ಬಳಿ ಹೆಸರು ನೋಂದಾಯಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಈ ಚಾಂಪಿಯನ್‌ಷಿಪ್‌ನಲ್ಲಿ ಉತ್ತಮ ಸಾಮರ್ಥ್ಯ ತೋರುವವರನ್ನು ಕರ್ನಾಟಕ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ. ಈ ತಂಡವು ಫೆಬ್ರುವರಿಯಲ್ಲಿ ಚೆನ್ನೈಯಲ್ಲಿ ನಡೆಯುವ 65ನೇ ರಾಷ್ಟ್ರೀಯ ಸೀನಿಯರ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿದೆ.

ಹೆಚ್ಚಿನ ಮಾಹಿತಿಗೆ ಬಿಬಿಎಕೆಯ ಕಾರ್ಯದರ್ಶಿ ದಿನೇಶ್‌ (ಮೊ: 9448488783) ಅವರನ್ನು ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು