ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23ರಿಂದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

Last Updated 11 ಅಕ್ಟೋಬರ್ 2019, 18:34 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆಯು ಜಿಲ್ಲಾಡಳಿತ, ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿಅಕ್ಟೋಬರ್‌ 23ರಿಂದ 25ರವರೆಗೆ ರಾಜ್ಯ ಮಟ್ಟದ 19 ವರ್ಷದೊಳಗಿನವರ ಅಥ್ಲೆಟಿಕ್ಸ್‌ ಕೂಟವನ್ನುನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ‘ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪಕ್ರೀಡಾಕೂಟ ಉದ್ಘಾಟಿಸುವರು. ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳಿಂದ 2,500ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ’ ಎಂದರು.

ಕ್ರೀಡಾಕೂಟದಲ್ಲಿ ಗುಡ್ಡಗಾಡು ಓಟ ಸೇರಿದಂತೆ ಸುಮಾರು 24 ವಿವಿಧ ಆಟೋಟ ಸ್ಪರ್ಧೆಗಳಿಗೆ ನೆಹರೂ ಹೊರಾಂಗಣ ಮತ್ತು ಒಳಾಂಗಣ ಕ್ರೀಡಾಂಗಣಗಳನ್ನು ಬಳಸಿಕೊಳ್ಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT