ಬುಧವಾರ, ಏಪ್ರಿಲ್ 21, 2021
33 °C

ರಾಜ್ಯ ಸಬ್‌ಜೂನಿಯರ್ ಬ್ಯಾಸ್ಕೆಟ್‌ಬಾಲ್ ಟೂರ್ನಿ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ಶನಿವಾರದಿಂದ 13 ವರ್ಷದೊಳಗಿನವರ (ಸಬ್‌ ಜೂನಿಯರ್) ರಾಜ್ಯ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ ಆಯೋಜಿಸಿದೆ. ಲೀಗ್ ಕಂ ನಾಕೌಟ್ ಮಾದರಿಯಲ್ಲಿ ನಡೆಯಲಿರುವ ಟೂರ್ನಿಯ ಪಂದ್ಯಗಳಿಗೆ ನಗರದ ಕಂಠೀರವ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಒಡಿಶಾದ ಕಟಕ್‌ನಲ್ಲಿ ಸೆಪ್ಟೆಂಬರ್ 3ರಿಂದ ನಡೆಯಲಿರುವ ರಾಷ್ಟ್ರೀಯ ಸಬ್ ಜೂನಿಯರ್ ಚಾಂಪಿಯನ್‌ಷಿಪ್‌ಗೆ ರಾಜ್ಯದ ಸಂಭಾವ್ಯ ತಂಡದ ಆಯ್ಕೆಯೂ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬಾಲಕ ಮತ್ತು ಬಾಲಕಿಯರ ವಿಭಾಗಗಳ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಬಾಲಕರ ವಿಭಾಗದ ಮೊದಲ ಪಂದ್ಯದಲ್ಲಿ ರಾಜ್‌ಕುಮಾರ್ ಬ್ಯಾಸ್ಕೆಟ್‌ಬಾಲ್ ಕ್ಲಬ್ ಮತ್ತು ಡಿಆರ್‌ಡಿಒ ತಂಡಗಳು ಸೆಣಸಲಿವೆ. ಬಾಲಕಿಯರ ವಿಭಾಗದಲ್ಲಿ ಭಾರತ್ ಎಸ್‌ಯು ಮತ್ತು ಎನ್‌ಜಿವಿ ಬ್ಯಾಸ್ಕೆಟ್‌ಬಾಲ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು