ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ, ಮೈಸೂರು ತಂಡಗಳು ಚಾಂಪಿಯನ್‌

ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕೊಕ್ಕೊ ಟೂರ್ನಿ
Last Updated 19 ನವೆಂಬರ್ 2018, 20:04 IST
ಅಕ್ಷರ ಗಾತ್ರ

ದಾವಣಗೆರೆ: ಆತಿಥೇಯ ದಾವಣಗೆರೆ ಹಾಗೂ ಮೈಸೂರು ಜಿಲ್ಲಾ ತಂಡಗಳು ಸೋಮವಾರ ಇಲ್ಲಿ ಮುಕ್ತಾಯಗೊಂಡ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕೊಕ್ಕೊ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‌ ಆದವು.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜಿಲ್ಲಾ
ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ದಕ್ಷಿಣ ಕನ್ನಡ ತಂಡದ ವಿರುದ್ಧ ದಾವಣಗೆರೆ ಗೆದ್ದಿತು.

ಮಹಿಳೆಯರ ವಿಭಾಗದ ಫೈನಲ್ ಪಂದ್ಯದಲ್ಲಿ ಮೈಸೂರು ತಂಡ 5–4ರಲ್ಲಿ ದಕ್ಷಿಣ ಕನ್ನಡ ತಂಡವನ್ನು ಮಣಿಸಿತು. ಬಹುಮಾನ: ಪುರುಷರ ವಿಭಾಗದಲ್ಲಿ ದಾವಣಗೆರೆಯ ಶಂಕರ್‌ ಉತ್ತಮ ಚೇಸರ್‌, ದಕ್ಷಿಣ ಕನ್ನಡದ ಮರಿಯಪ್ಪ ಉತ್ತಮ ಡಿಫೆಂಡರ್‌ ಪ್ರಶಸ್ತಿ ಪಡೆದರು. ಮಹಿಳೆಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ಸುಮಿತ್ರಾ ಉತ್ತಮ ಚೇಸರ್‌, ಮೈಸೂರಿನ ಚೈತ್ರಾ ಉತ್ತಮ ಡಿಫೆಂಡರ್‌ ಪ್ರಶಸ್ತಿ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT