ರಾಜ್ಯಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ

ಮೈಸೂರು: ರಾಜ್ಯಮಟ್ಟದ 25ನೇ ವಾಲಿಬಾಲ್ ಚಾಂಪಿಯನ್‌ಷಿಪ್ ಇಂದಿನಿಂದ 29ರವರೆಗೆ ಮೈಸೂರು ವಿಶ್ವವಿದ್ಯಾಲಯದ ಸ್ಫೋರ್ಟ್ಸ್ ಪೆವಿಲಿಯನ್‌ನಲ್ಲಿ ನಡೆಯಲಿದೆ.
‘ಮೈಸೂರು ಜಿಲ್ಲಾ ವಾಲಿಬಾಲ್ ಸಂಸ್ಥೆ ಸಹಯೋಗದಲ್ಲಿ ಹೊನಲು–ಬೆಳಕಿನ ಟೂರ್ನಿಯನ್ನು ಆಯೋಜಿಸಲಾಗಿದೆ. ಎಲ್ಲ ಜಿಲ್ಲೆಗಳ ಪುರುಷ ಹಾಗೂ ಮಹಿಳಾ ತಂಡಗಳ 700ಕ್ಕೂ ಹೆಚ್ಚು ಆಟಗಾರರು ಭಾಗವಹಿಸುತ್ತಿದ್ದಾರೆ’ ಎಂದು ರಾಜ್ಯ ವಾಲಿಬಾಲ್ ಸಂಸ್ಥೆ ಸಂಸ್ಥೆಯ ತೀರ್ಪುಗಾರರ ಮಂಡಳಿ ಅಧ್ಯಕ್ಷ ಎಂ.ಚಂದ್ರಕುಮಾರ್ ಹೇಳಿದರು.
ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘180 ಪಂದ್ಯಗಳು ನಡೆಯಲಿದ್ದು, ಎರಡೂ ವಿಭಾಗಗಳಲ್ಲಿ ಮೊದಲ
ನಾಲ್ಕು ಸ್ಥಾನಗಳಿಗೆ ಟ್ರೋಫಿ ನೀಡಲಾಗುವುದು. 69ನೇ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ಗೆ ರಾಜ್ಯ ಪುರುಷ ಮತ್ತು ಮಹಿಳಾ ತಂಡದ ಸದಸ್ಯರ ಆಯ್ಕೆಯೂ ನಡೆಯಲಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.