ಶನಿವಾರ, ಜೂಲೈ 11, 2020
23 °C

ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಗೋಪಾಲಗೌಡ ಬಡಾವಣೆಯ ಅರುಣ್ (28) ಅವರ ಮೃತದೇಹ ಸೋಮವಾರ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ತುಂಗಾ ನದಿಯ ಹಿನ್ನೀರಿನಲ್ಲಿ ಪತ್ತೆಯಾಗಿದೆ. 

ಶನಿವಾರ ಸ್ನೇಹಿತರೊಂದಿಗೆ ತೆರಳಿದ್ದ ಅರುಣ್ ಕಾಣೆಯಾಗಿದ್ದಾರೆ ಎಂದು ಪೋಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತುಂಗಾ ನದಿಯ ಹಿನ್ನೀರಿನಲ್ಲಿ ಅರುಣ್‌ಗೆ ಸೇರಿದ ಪರ್ಸ್, ಮೊಬೈಲ್ ಹಾಗೂ ಶೂಗಳು ದೊರೆತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಅವುಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದರು. ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.

ಅರುಣ್‌ಗೆ ಈಚೆಗೆ ವಿವಾಹ ನಿಶ್ಚಿತಾರ್ಥ ಆಗಿತ್ತು. ಅವರನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ದೂರು ದಾಖಲಿಸಿದ್ದು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು