ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣ: ತ್ವರಿತ ವಿಚಾರಣೆಗೆ ನ್ಯಾಯಾಲಯ

Last Updated 10 ಜೂನ್ 2018, 19:19 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗೆ ದೇಶದಾದ್ಯಂತ ನ್ಯಾಯಾಲಯಗಳನ್ನು ಸ್ಥಾಪಿಸಲು, ಚುರುಕಾದ ತನಿಖೆ ಹಾಗೂ ಕ್ಷಿಪ್ರವಾಗಿ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಕಾನೂನು ಸಚಿವಾಲಯ ಶೀಘ್ರವೇ ಪ್ರಸ್ತಾವವೊಂದನ್ನು ಸಿದ್ಧಪಡಿಸಲಿದೆ.

‘ಈ ಪ್ರಸ್ತಾವಕ್ಕೆ ಸಂಬಂಧಪಟ್ಟ ಹಲವು ವಿಭಾಗಗಳು ಗೃಹ ಸಚಿವಾಲಯದ ಅಡಿ ಬರುವುದರಿಂದ, ಆ ಸಚಿವಾಲಯವೇ ಪ್ರಸ್ತಾವವನ್ನು ಅನುಷ್ಠಾನಗೊಳಿಸುವುದು ಉತ್ತಮ ಎನಿಸುತ್ತದೆ’ ಎಂದು ಕಾನೂನು ಸಚಿವಾಲಯದ ಕಾರ್ಯದರ್ಶಿ ಈಚೆಗೆ ಸಂಪುಟದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

12 ವರ್ಷದವರೆಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಮರಣ ದಂಡನೆ ವಿಧಿಸುವಂತೆ ಈಚೆಗೆ ತಿದ್ದುಪಡಿ ಮಾಡಲಾದ ಕಾನೂನಿನ ಭಾಗವಾಗಿ ಈ ಪ್ರಸ್ತಾವವನ್ನು ಸಿದ್ಧಪಡಿಸಲಾಗುತ್ತಿದೆ. ಶೀಘ್ರವೇ ಸಂಪುಟದ ಎದುರು ಇದು ಮಂಡನೆಯಾಗುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT