ಶುಕ್ರವಾರ, ಜೂನ್ 25, 2021
21 °C

ಈಜು: ಸಂಜಯ್‌, ರಿಧಿಮಾ, ನೀನಾಗೆ ಚಿನ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯವಾಡ: ಕರ್ನಾಟಕದ ಸಿ.ಜೆ.ಸಂಜಯ್‌, ನೀನಾ ವೆಂಕಟೇಶ್‌ ಮತ್ತು ರಿಧಿಮಾ ವೀರೇಂದ್ರ ಕುಮಾರ್‌ ಅವರು ಇಲ್ಲಿ ಗುರುವಾರ ಆರಂಭವಾದ ದಕ್ಷಿಣ ವಲಯ ಈಜು ಚಾಂಪಿಯನ್‌ಷಿಪ್‌ನಲ್ಲಿ ತಲಾ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಬಾಲಕರ ಗುಂಪು–1ರ 100 ಮೀಟರ್ಸ್‌ ಬಟರ್‌ಫ್ಲೈ ವಿಭಾಗದಲ್ಲಿ ಸಂಜಯ್‌ ಒಂದು ನಿಮಿಷ 08 ಸೆಕೆಂಡುಗಳಲ್ಲಿ ಗುರಿ ಕ್ರಮಿಸಿ ಮೊದಲಿಗರಾದರು. 100 ಮೀಟರ್ಸ್‌ ಫ್ರೀಸ್ಟೈಲ್‌ನಲ್ಲಿ ಅವರು 55.62 ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು.

ಬಾಲಕಿಯರ ಗುಂಪು–3ರ 100 ಮೀಟರ್ಸ್‌ ಬ್ಯಾಕ್‌ಸ್ಟ್ರೋಕ್‌ನಲ್ಲಿ ರಿಧಿಮಾ 1 ನಿಮಿಷ 10.70 ಸೆಕೆಂಡುಗಳಲ್ಲಿ ಗುರಿ ಸೇರಿದರು. 100 ಮೀಟರ್ಸ್‌ ಫ್ರೀಸ್ಟೈಲ್‌ನಲ್ಲಿ ಅವರು 1 ನಿಮಿಷ 05.9 ಸೆಕೆಂಡುಗಳಲ್ಲಿ ಗುರಿ ತಲು‍‍ಪಿದರು.

ಬಾಲಕಿಯರ ಗುಂಪು–2ರ 100 ಮೀಟರ್ಸ್‌ ಬಟರ್‌ಫ್ಲೈನಲ್ಲಿ ನೀನಾ 1 ನಿಮಿಷ 08.31 ಸೆಕೆಂಡುಗಳ ಸಾಮರ್ಥ್ಯ ತೋರಿದರು. 100 ಮೀಟರ್ಸ್‌ ಬ್ಯಾಕ್‌ಸ್ಟ್ರೋಕ್‌ನಲ್ಲಿ ಅವರು 1 ನಿಮಿಷ 09.84 ಸೆಕೆಂಡುಗಳಲ್ಲಿ ನಿಗದಿತ ದೂರ ಕ್ರಮಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು