ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೂರ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯಗಳಿವೆ - ವಕೀಲ

Last Updated 28 ಮೇ 2018, 13:28 IST
ಅಕ್ಷರ ಗಾತ್ರ

ನವದೆಹಲಿ: ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದ ಶಶಿ ತರೂರ್ ವಿರುದ್ಧ ದಾಖಲಾಗಿದ್ದ ಆರೋಪಪಟ್ಟಿ ಕುರಿತ ವಿಚಾರಣೆಯ ವೇಳೆ, ‘ಪತ್ನಿ ಪುಷ್ಕರ್‌ ಅವರ ಆತ್ಮಹತ್ಯೆಗೆ ತರೂರ್‌ ಕುಮ್ಮಕ್ಕು ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯಗಳಿವೆ’ ಎಂದು ವಕೀಲರು ವಾದಿಸಿದರು. 

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸಮರ್‌ ವಿಶಾಲ್‌ ಅವರು ಆದೇಶವನ್ನು ಜೂನ್‌ 5 ರವರೆಗೆ ಕಾಯ್ದಿರಿಸಿದೆ. 

ವಿಚಾರಣೆಯ ವೇಳೆ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರೂ ನ್ಯಾಯಾಲಯದಲ್ಲಿ ಹಾಜರಿದ್ದರು.

ಕೌಟುಂಬಿಕ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಶಶಿ ತರೂರ್ ವಿರುದ್ದ ಸೆಕ್ಷನ್‌ 498ಎ, 306 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

2014 ಜನವರಿ 17ರಂದು ಸುನಂದಾ ಪುಷ್ಕರ್‌ ಅವರ ಮೃತದೇಹವು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT