ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಾ, ಶ್ರೀಕಾಂತ್‌ಗೆ ಪ್ರಶಸ್ತಿಯ ಕನಸು

ಇಂದಿನಿಂದ ಸೈಯದ್‌ ಮೋದಿ ಬ್ಯಾಡ್ಮಿಂಟನ್‌ ಟೂರ್ನಿ: ಸಿಂಧು ಅಲಭ್ಯ
Last Updated 19 ನವೆಂಬರ್ 2018, 19:47 IST
ಅಕ್ಷರ ಗಾತ್ರ

ಲಖನೌ:ಭಾರತದ ಸೈನಾ ನೆಹ್ವಾಲ್‌ ಮತ್ತು ಕಿದಂಬಿ ಶ್ರೀಕಾಂತ್ ಅವರು ಮಂಗಳವಾರದಿಂದ ನಡೆಯುವ ಸೈಯದ್‌ ಮೋದಿ ಇಂಟರ್‌ನ್ಯಾಷನಲ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸುವ ವಿಶ್ವಾಸದಲ್ಲಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಪಿ.ವಿ.ಸಿಂಧು, ಟೂರ್ನಿಗೆ ಅಲಭ್ಯರಾಗಿದ್ದಾರೆ. ಚೀನಾದಲ್ಲಿ ನಡೆಯುವ ವಿಶ್ವ ಟೂರ್‌ ಫೈನಲ್ಸ್‌ಗೆ ತರಬೇತಿ ಪಡೆಯುವ ಉದ್ದೇಶದಿಂದ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಸೈನಾ ನೆಹ್ವಾಲ್‌ ಮಹಿಳೆಯರ ಸಿಂಗಲ್ಸ್‌ನಲ್ಲಿ ಭಾರತದ ಭರವಸೆಯಾಗಿದ್ದಾರೆ.

ಈ ಬಾರಿಯ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಸೈನಾ, ಮೊದಲ ಸುತ್ತಿನಲ್ಲಿ ಮಾರಿಷಸ್‌ನ ಕೇಟ್‌ ಫೂ ಕೂನ್‌ ವಿರುದ್ಧ ಸೆಣಸಲಿದ್ದಾರೆ.

ಚೀನಾದ ಲೀ ಕ್ಸುಯೆರುಯಿ ಕೂಡಾ ಕಣದಲ್ಲಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರ್ತಿಯರಲ್ಲಿ ಒಬ್ಬರೆನಿಸಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಆಡಲಿರುವ ಶ್ರೀಕಾಂತ್‌ಗೆ ಮೊದಲ ಸುತ್ತಿನಲ್ಲಿ ಥಾಯ್ಲೆಂಡ್‌ನ ತಾನೊಂಗ್‌ಸಕ್‌ ಸಯೆನ್ಸೊಮ್‌ಬೂನ್‌ಸುಕ್‌ ಸವಾಲು ಎದುರಾಗಲಿದೆ.

ಹಾಲಿ ಚಾಂಪಿಯನ್‌ ಸಮೀರ್‌ ವರ್ಮಾ, ಪ್ರಶಸ್ತಿ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಸ್ವಿಸ್‌ ಓಪನ್‌ ಚಾಂಪಿಯನ್‌ ಎಚ್‌.ಎಸ್‌.ಪ್ರಣಯ್‌ ಅವರು ಥಾಯ್ಲೆಂಡ್‌ನ ಅದುಲ್‌ರಾಚ್‌ ನಮಕುಲ್‌ ಎದುರು ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ.

ಗಾಯದಿಂದ ಗುಣಮುಖರಾಗಿರುವ ಆರ್‌.ಎಂ.ವಿ. ಗುರುಸಾಯಿದತ್‌ಗೆ ಆರಂಭಿಕ ಸುತ್ತಿನಲ್ಲಿ ಜರ್ಮನಿಯ ಜೊನಾಥನ್‌ ಪೆರ್ಸನ್‌ ಸವಾಲು ಎದುರಾಗಲಿದೆ. ನಾಲ್ಕನೇ ಶ್ರೇಯಾಂಕದ ಆಟಗಾರ ಬಿ.ಸಾಯಿ ಪ್ರಣೀತ್‌ ಮೊದಲ ಸುತ್ತಿನಲ್ಲಿ ರಷ್ಯಾದ ಸರ್ಜಿ ಸಿರಾಂಟ್‌ ಎದುರು ಪೈ‍ಪೋಟಿ ನಡೆಸಲಿದ್ದಾರೆ.

ಸಾರ್‌ಲೋರ್‌ಲಕ್ಸ್‌ ಓಪನ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ್ದ ಶುಭಾಂಕರ್‌ ಡೇ ಕೂಡಾ ಚಾಂಪಿಯನ್‌ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ಅವರು ಮೊದಲ ಸುತ್ತಿನಲ್ಲಿ ಚೀನಾದ ಜೊವು ಜೆಕಿ ವಿರುದ್ಧ ಆಡಲಿದ್ದಾರೆ.

ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ, ಮನು ಅತ್ರಿ ಮತ್ತು ಬಿ.ಸುಮೀತ್‌ ರೆಡ್ಡಿ ಅವರು ಪುರುಷರ ಡಬಲ್ಸ್‌ನಲ್ಲಿ ಪ್ರಶಸ್ತಿ ಗೆಲ್ಲುವ ತವಕದಲ್ಲಿದ್ದಾರೆ.

ಕರ್ನಾಟಕದ ಅಶ್ವಿನಿ ‍ಪೊನ್ನಪ್ಪ ಅವರು ಮಹಿಳೆಯರ ಡಬಲ್ಸ್‌ ಮತ್ತು ಮಿಶ್ರ ಡಬಲ್ಸ್‌ ವಿಭಾಗಗಳಲ್ಲಿ ಅಂಗಳಕ್ಕಿಳಿಯಲಿದ್ದಾರೆ. ಡಬಲ್ಸ್‌ನಲ್ಲಿ ಅವರು ಎನ್‌.ಸಿಕ್ಕಿ ರೆಡ್ಡಿ ಹಾಗೂ ಮಿಶ್ರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌ ಜೊತೆಗೂಡಿ ಆಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT