ಶುಕ್ರವಾರ, ಜನವರಿ 27, 2023
17 °C

ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ಗೆ ಖೇಲ್ ರತ್ನ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ ಅವರಿಗೆ ಕ್ರೀಡಾಕ್ಷೇತ್ರದ ಅತ್ಯುನ್ನತ  ಗೌರವ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿಯನ್ನು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ‌

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಪ್ಯಾರಾ ಶೂಟಿಂಗ್ ಕೋಚ್ ಸುಮಾ ಶಿರೂರ್ ಅವರಿಗೆ ದ್ರೋಣಾಚಾರ್ಯ, ಅಥ್ಲೀಟ್ ಅಶ್ವಿನಿ ಅಕ್ಕುಂಜಿ ಹಾಗೂ ಕಬಡ್ಡಿ ಆಟಗಾರ ಬಿ.ಸಿ. ಸುರೇಶ್ ಅವರಿಗೆ ಧ್ಯಾನಚಂದ್ ಜೀವಮಾನ ಸಾಧನೆ ಪುರಸ್ಕಾರ ನೀಡಲಾಯಿತು. ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್, ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ನಿಖತ್ ಜರೀನ್ ಸೇರಿದಂತೆ  25 ಕ್ರೀಡಾಪಟು ಗಳಿಗೆ ಅರ್ಜುನ ಪ್ರಶಸ್ತಿ  ಪ್ರದಾನ ಮಾಡಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು