ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ‍್ಯಾಂಕಿಂಗ್‌: 53ನೇ ಸ್ಥಾನಕ್ಕೇರಿದ ಮಣಿಕಾ

Last Updated 4 ನವೆಂಬರ್ 2018, 19:15 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮಣಿಕಾ ಬಾತ್ರಾ, ಭಾನುವಾರ ಅಂತರರಾಷ್ಟ್ರೀಯ ಟೇಬಲ್ ಟೆನಿಸ್‌ ಫೆಡರೇಷನ್‌ (ಐಟಿಟಿಎಫ್‌) ಬಿಡುಗಡೆ ಮಾಡಿರುವ ಮಹಿಳಾ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 53ನೇ ಸ್ಥಾನಕ್ಕೇರಿದ್ದಾರೆ. ಇದು ಮಣಿಕಾ ಅವರ ವೃತ್ತಿಬದುಕಿನ ಶ್ರೇಷ್ಠ ಸಾಧನೆಯಾಗಿದೆ.

ಕಾಮನ್‌ವೆಲ್ತ್‌ ಕ್ರೀಡಾಕೂಟದ ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆ ಹೊಂದಿರುವ ಮಣಿಕಾ, ಎರಡು ಸ್ಥಾನ ಬಡ್ತಿ ಹೊಂದಿದ್ದಾರೆ.

23 ವರ್ಷ ವಯಸ್ಸಿನ ಮಣಿಕಾ, ಈ ಬಾರಿಯ ಕಾಮನ್‌ವೆಲ್ತ್‌ನಲ್ಲಿ ಎರಡು ಚಿನ್ನ ಸೇರಿದಂತೆ ಒಟ್ಟು ನಾಲ್ಕು ಪದಕಗಳನ್ನು ಜಯಿಸಿ ದಾಖಲೆ ನಿರ್ಮಿಸಿದ್ದರು. ಏಷ್ಯನ್‌ ಕ್ರೀಡಾಕೂಟದ ಮಿಶ್ರ ಡಬಲ್ಸ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಜಿ.ಸತ್ಯನ್‌ 35ನೇ ಸ್ಥಾನಕ್ಕೆ ಪ್ರಗತಿ ಕಂಡಿದ್ದಾರೆ. ಇದು ಅವರ ಶ್ರೇಷ್ಠ ಸಾಧನೆಯಾಗಿದೆ.

ಕಾಮನ್‌ವೆಲ್ತ್‌ನಲ್ಲಿ ಮೂರು ಮತ್ತು ಏಷ್ಯನ್‌ ಕ್ರೀಡಾಕೂಟದಲ್ಲಿ ಒಂದು ಪದಕ ಗೆದ್ದಿದ್ದ ಸತ್ಯನ್‌ ಒಂದು ಸ್ಥಾನ ಮೇಲೇರಿದ್ದಾರೆ.

ಅನುಭವಿ ಆಟಗಾರ ಅಚಂತಾ ಶರತ್‌ಕಮಲ್‌ 31ನೇ ಸ್ಥಾನ ಕಾಪಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT