ಭಾನುವಾರ, ಮೇ 29, 2022
21 °C

ಟೇಬಲ್ ಟೆನಿಸ್: ತನಿಷ್ಕಾಗೆ ಕಂಚಿನ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದ ತನಿಷ್ಕಾ ಕೆ ಅವರು ಡೆಹ್ರಾಡೂನ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕಂಚಿನ ಪದಕ ಗಳಿಸಿದರು. ಸೆಮಿಫೈನಲ್‌ನಲ್ಲಿ ಪಶ್ಚಿಮ ಬಂಗಾಳದ ಅಂಕೋಲಿಕ ಚಕ್ರವರ್ತಿ ಎದುರು 0–3ರಲ್ಲಿ ಸೋತು ಅವರು ಮೂರನೇ ಸ್ಥಾನಕ್ಕೆ ಸಮಾಧಾನಪಟ್ಟುಕೊಂಡರು. 

ಕ್ವಾರ್ಟರ್ ಫೈನಲ್‌ನಲ್ಲಿ ಪಶ್ಚಿಮ ಬಂಗಾಳದ ಶುಭೊಮಿತಾ ಬಾಸಕ್‌ ವಿರುದ್ಧ ತನಿಷ್ಕಾ 3–0ಯಿಂದ ಜಯ ಗಳಿಸಿದ್ದರು. ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿ ಗುಜರಾತ್‌ನ ಚಾರ್ಮಿ ತ್ರಿವೇದಿ ವಿರುದ್ಧ 3–0ಯಿಂದ ಗೆದ್ದಿದ್ದ ಅವರು ಮುಖ್ಯ ಸುತ್ತಿನ ಮೊದಲ ಪಂದ್ಯದಲ್ಲಿ ಪಶ್ಚಿಮ ಬಂಗಾಳದ ಬಿಬೇಷ್ನಾ ಸಹಾ ಅವರನ್ನು 3–0ಯಿಂದ ಸೋಲಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು