ಗುರುವಾರ , ಜುಲೈ 16, 2020
25 °C

ಥಾಮಸ್ ಆ್ಯಂಡ್ ಉಬರ್ ಕಪ್ ಫೈನಲ್ಸ್ ಮುಂದಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ ಹಾವಳಿಯಿಂದಾಗಿ ಥಾಮಸ್ ಆ್ಯಂಡ್ ಉಬರ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯನ್ನು ಎರಡನೇ ಬಾರಿ ಮುಂದೂಡಲಾಗಿದೆ. ಡೆನ್ಮಾರ್ಕ್‌ನ ಆರಸ್‌ನಲ್ಲಿ ಅಕ್ಟೋಬರ್ ಮೂರರಿಂದ 11ರ ವರೆಗೆ ಟೂರ್ನಿ ನಡೆಯಲಿದೆ ಎಂದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್‌) ಬುಧವಾರ ತಿಳಿಸಿದೆ. 

ಮೇ 16ರಿಂದ 24ರ ವರೆಗೆ ಟೂರ್ನಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ವೈರಾಣು ಜಾಗತಿಕ ಆರೋಗ್ಯ ಸಂಕಟ ಉಂಟುಮಾಡಿದ ಕಾರಣ ಆಗಸ್ಟ್‌ 15ರಿಂದ 23ರ ವರೆಗೆ ನಡೆಸಲು ಮಾರ್ಚ್ 20ರಂದು ತೀರ್ಮಾನಿಸಲಾಗಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸೆಪ್ಟೆಂಬರ್ ವರೆಗೆ ಟೂರ್ನಿ ಆಯೋಜಿಸಲು ಸಾಧ್ಯವಿಲ್ಲ ಎಂದು ಬಿಡಬ್ಲ್ಯುಎಫ್‌ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು