ಶುಕ್ರವಾರ, ಸೆಪ್ಟೆಂಬರ್ 24, 2021
23 °C

Tokyo Olympics ಬಾಕ್ಸಿಂಗ್‌ | ಆಶಿಶ್ ಕುಮಾರ್ ನಿರ್ಗಮನ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಟೋಕಿಯೊ: ಬಾಕ್ಸಿಂಗ್ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ನಿರಾಸೆ ಎದುರಾಗಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿರುವ ಆಶಿಶ್ ಕುಮಾರ್ ಸೋಲು ಅನುಭವಿಸಿದ್ದಾರೆ.

ಸೋಮವಾರ ನಡೆದ ಪುರುಷರ 75 ಕೆ.ಜಿ. ವಿಭಾಗದಲ್ಲಿ ಆಶಿಶ್ ಕುಮಾರ್, ಚೀನಾದ ಎರ್ಬಿಕ್ ಟೌಹೆಟಾ ವಿರುದ್ಧ 0-5ರ ಅಂತರದಲ್ಲಿ ಸೋಲು ಅನುಭವಿಸಿದರು.

ಇದನ್ನೂ ಓದಿ: 

 

 

 

27 ವರ್ಷದ ಹಿಮಾಚಲ ಪ್ರದೇಶ ಮೂಲದ ಆಶಿಶ್, ಅವರಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಮೂಡಿಬರಲಿಲ್ಲ.

 

ಇದರೊಂದಿಗೆ ವಿಕಾಸ್ ಕೃಷ್ಣನ್ (69 ಕೆ.ಜಿ) ಹಾಗೂ ಮನೀಶ್ ಕೌಶಿಕ್ (63 ಕೆ.ಜಿ) ಬೆನ್ನಲ್ಲೇ ಆಶಿಶ್ ಕುಮಾರ್ ಸಹ ನಿರ್ಗಮನದ ಹಾದಿ ಹಿಡಿದಿದ್ದಾರೆ.

ಇದೀಗ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತದ ಏಕ ಮಾತ್ರ ಭರವಸೆಯಾಗಿರುವ ಲವ್ಲಿನಾ ಬೊರ್ಗೊಹೈನ್‌ (69 ಕೆಜಿ) ಬುಧವಾರದಂದು ಕಣಕ್ಕಿಳಿಯಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು