ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Tokyo Olympics | ಭಾರತ ಮಹಿಳಾ ಹಾಕಿ ತಂಡಕ್ಕೆ ಹ್ಯಾಟ್ರಿಕ್ ಸೋಲಿನ ಮುಖಭಂಗ

ಅಕ್ಷರ ಗಾತ್ರ

ಟೋಕಿಯೊ: ಯುವ ಹಾಗೂ ಅನುಭವಿ ಆಟಗಾರ್ತಿಯರನ್ನು ಹೊಂದಿರುವ ಹೊರತಾಗಿಯೂ ಭಾರತದ ಮಹಿಳಾ ಹಾಕಿ ತಂಡವು ಗ್ರೇಟ್ ಬ್ರಿಟನ್ ವಿರುದ್ಧ 1-4 ಗೋಲುಗಳ ಅಂತರದಲ್ಲಿ ಸೋಲಿಗೆ ಶರಣಾಗಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬುಧವಾರ ನಡೆದ 'ಎ' ಗುಂಪಿನ ಮೂರನೇ ಪಂದ್ಯದಲ್ಲೂ ಭಾರತ ಮಹಿಳಾ ತಂಡ ಮುಗ್ಗರಿಸಿತು.

ಉತ್ತಮ ಅವಕಾಶಗಳನ್ನು ಕೈಚೆಲ್ಲಿರುವುದು ಭಾರತಕ್ಕೆ ಮುಳುವಾಗಿ ಪರಿಣಮಿಸಿತು. ಅತ್ತ ಬ್ರಿಟನ್ ಪರ ಹನ್ನ ಮಾರ್ಟಿನ್ (2ನೇ ಹಾಗೂ 19ನೇ ನಿಮಿಷ), ಲಿಲ್ಲಿ ಓಸ್ಲೆ (41ನೇ ನಿಮಿಷ), ಗ್ರೇಸ್ ಬಾಲ್ಸ್‌ಡನ್ (57ನೇ ನಿಮಿಷ) ಗೆಲುವಿನ ಗೋಲುಗಳನ್ನು ಬಾರಿಸಿದರು.

ಭಾರತದ ಪರ 23ನೇ ನಿಮಿಷದಲ್ಲಿ ಶರ್ಮಿಳಾ ದೇವಿ ಗೋಲು ಬಾರಿಸಿ ಸೋಲಿನ ಅಂತರವನ್ನು ತಗ್ಗಿಸಿದರು.

ಈ ಪಂದ್ಯದಲ್ಲಿ ಭಾರತ ಕನಿಷ್ಠ ಒಂದು ಅಂಕವನ್ನಾದರೂ ಗಳಿಸಬೇಕಿತ್ತು. ಆದರೆ ಈಗ ಕ್ವಾರ್ಟರ್‌ಫೈನಲ್ ಹಂತವನ್ನು ತಲುಪಲು ಮುಂದಿನ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಅಂಕಪಟ್ಟಿಯಲ್ಲಿ ಇನ್ನಷ್ಟೇ ಖಾತೆ ತೆರೆಯಬೇಕಾಗಿರುವ ಭಾರತ ತಂಡವು ಕೊನೆಯ ಸ್ಥಾನದಲ್ಲಿದೆ.

ರಾಣಿ ರಾಂಪಾಲ್ ಪಡೆಯು ವಿಶ್ವ ನಂ.1 ರ‍್ಯಾಂಕ್‌ನ ಹಾಲೆಂಡ್ ವಿರುದ್ಧ 1-5 ಮತ್ತು ಜರ್ಮನಿ ವಿರುದ್ಧ 0-2ರ ಗೋಲುಗಳ ಅಂತರದ ಸೋಲು ಅನುಭವಿಸಿತ್ತು.

ಈಗ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಐರ್ಲೆಂಡ್ ಸವಾಲನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT