ಶನಿವಾರ, ಸೆಪ್ಟೆಂಬರ್ 25, 2021
29 °C

Tokyo Olympics | ಪದಕಕ್ಕೆ ಪಂಚ್; ಮೇರಿ ಕೋಮ್, ವಿಜೇಂದರ್ ಸಾಲಿಗೆ ಲವ್ಲಿನಾ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಟೋಕಿಯೊ: ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಸಾಧ್ಯವಾಗದೇ ಇರಬಹುದು. ಆದರೆ ಅವರದ್ದೇ ಹಾದಿ ತುಳಿದಿರುವ 23ರ ಹರೆಯದ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್, ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸುವ ಮೂಲಕ ವಿಶ್ವದೆಲ್ಲೆಡೆ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಮಹಿಳೆಯರ ವೆಲ್ಟರ್‌ವೇಟ್ (69 ಕೆ.ಜಿ) ವಿಭಾಗದ ಕ್ವಾರ್ಟರ್‌ಫೈನಲ್ ಮುಖಾಮುಖಿಯಲ್ಲಿ ಅಸ್ಸಾಂ ಮೂಲದ ಲವ್ಲಿನಾ, ಮಾಜಿ ವಿಶ್ವ ಚಾಂಪಿಯನ್ ಚೀನಾ ತೈಪೆಯ ಚಿನ್ ಚೆನ್ ವಿರುದ್ಧ 4-1ರ ಅಂತರದ ಗೆಲುವು ದಾಖಲಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಇದರೊಂದಿಗೆ ಕನಿಷ್ಠ ಕಂಚಿನ ಪದಕ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: 

ಒಲಿಂಪಿಕ್ಸ್‌ನಲ್ಲಿ ತಮ್ಮ ಮೆಚ್ಚಿನ ಮೇರಿ ಕೋಮ್ ಹಾಗೂ ವಿಜೇಂದರ್ ಸಿಂಗ್ ಸಾಧನೆಯನ್ನು ಲವ್ಲಿನಾ ಸರಿಗಟ್ಟಿದ್ದಾರೆ. ಅಲ್ಲದೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ಭಾರತದ ಮೂರನೇ ಬಾಕ್ಸರ್ ಎಂಬ ಹಿರಿಮೆಗೆ ಭಾಜನರಾಗಲಿದ್ದಾರೆ.

 

 

 

2008ರಲ್ಲಿ ವಿಜೇಂದರ್ ಹಾಗೂ 2012ರಲ್ಲಿ ಮೇರಿ ಕಂಚಿನ ಪದಕ ಗೆದ್ದಿದ್ದರು. ಈಗ ಲವ್ಲಿನಾಗೆ ಅದಕ್ಕಿಂತಲೂ ಉತ್ತಮ ಸಾಧನೆ ಮಾಡುವ ಅವಕಾಶವೊದಗಿ ಬಂದಿದೆ.

 

ರಿಯೋ ಸಾಧನೆ ಸರಿಗಟ್ಟಿದ ಭಾರತ...
2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಕೇವಲ ಎರಡು ಪದಕಗಳನ್ನಷ್ಟೇ ಗೆದ್ದಿತ್ತು. ಆ ಸಾಧನೆಯನ್ನೀಗ ಭಾರತ ಸರಿಗಟ್ಟಿದೆ.

ನಾರಿಶಕ್ತಿಯ ಪ್ರತೀಕ...
ಲವ್ಲಿನಾ ಬೊರ್ಗೊಹೈನ್ ಭಾರತದ ನಾರಿಶಕ್ತಿಯ ಪ್ರತೀಕವಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಮಹಿಳೆಯರ ವೇಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ಈಗ ಈಶಾನ್ಯ ಭಾರತದ ಮತ್ತೊಬ್ಬ ಮಹಿಳಾ ಸ್ಪರ್ಧಿ ದೇಶದ ಪಾಲಿಗೆ ಹೆಮ್ಮೆಯಾಗಿದ್ದಾರೆ.

ಇದನ್ನೂ ಓದಿ: 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು