ಗುರುವಾರ , ಸೆಪ್ಟೆಂಬರ್ 23, 2021
26 °C

Tokyo Olympics: ಪದಕ ವಿಜೇತೆ ಪಿ.ವಿ.ಸಿಂಧುಗೆ ಭವ್ಯ ಸ್ವಾಗತ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಮರಳಿದ ಪಿ.ವಿ.ಸಿಂಧು ಅವರಿಗೆ ಮಂಗಳವಾರ ಭವ್ಯವಾದ ಸ್ವಾಗತ ದೊರೆಯಿತು.

ಸಿಂಧು ಅವರು ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಪ್ರವೇಶಿಸುತ್ತಿದ್ದಂತೆ ನಿಲ್ದಾಣದ ಸಿಬ್ಬಂದಿ ಚಪ್ಪಾಳೆಯ ಮೂಲಕ ಅವರನ್ನು ಸ್ವಾಗತಿಸಿದರು. ಮಾಸ್ಕ್ ಧರಿಸಿದ್ದ ಸಿಂಧು ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು.

ಓದಿ: 

ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್‌ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ಅವರು ಭಾರತೀಯ ಕ್ರೀಡಾ ಪ್ರಾಧಿಕಾರದ ಇತರ ಅಧಿಕಾರಿಗಳೊಂದಿಗೆ ಸಿಂಧು ಅವರನ್ನು ಬರಮಾಡಿಕೊಂಡರು. ಬಳಿಕ ಸಿಂಧು ಮತ್ತು ಅವರ ಕೋಚ್, ಕೊರಿಯಾದ ಪಾರ್ಕ್ ತೇ ಸ್ಯಾಂಗ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

‘ನಾನು ತುಂಬಾ ಖುಷಿಯಾಗಿದ್ದೇನೆ. ಪ್ರತಿಯೊಬ್ಬರೂ ನನ್ನನ್ನು ಅಭಿನಂದಿಸಿದ್ದಾರೆ. ನನ್ನನ್ನು ಬೆಂಬಲಿಸಿದ ಮತ್ತು ಪ್ರೋತ್ಸಾಹಿಸಿದ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್‌ ಇಂಡಿಯಾ ಮತ್ತು ಪ್ರತಿಯೊಬ್ಬರಿಗೂ ಕೃತಜ್ಞತೆಗಳು. ಇದೊಂದು ರೋಮಾಂಚಕಾರಿ ಮತ್ತು ಸಂಭ್ರಮದ ಕ್ಷಣ’ ಎಂದು ಸಿಂಧು ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು