ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೋಕಿಯೊ ಒಲಿಂಪಿಕ್: ಆಳ್ವಾಸ್‌ನ ಕ್ರೀಡಾ ವಿದ್ಯಾರ್ಥಿಗಳಾದ ಧನಲಕ್ಷಿ, ಶುಭಾ ಆಯ್ಕೆ

Last Updated 14 ಜುಲೈ 2021, 10:00 IST
ಅಕ್ಷರ ಗಾತ್ರ

ಮೂಡುಬಿದಿರೆ: ಜಪಾನಿನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್‌ಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ,ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮಿ ಶೇಖರ್ ಹಾಗೂ ಶುಭಾ ವೆಂಕಟೇಶನ್ ಅವರು 4x400 ಮಿಕ್ಸಡ್ ರಿಲೆಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ ಎಂದರು.

2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ತಿಳಿಸಿದರು.

ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್‌ನಲ್ಲಿ ಭಾಗವಹಿಸುವ ಸಾಧನೆ ಮಾಡಿದ್ದು, ಈ ಬಾರಿಯ ಒಲಿಂಪಿಕ್‌ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ.ಮೋಹನ ಆಳ್ವರು ತಲಾ ₹1 ಲಕ್ಷ ಪ್ರೋತ್ಸಾಹಧನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT