ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Tokyo Olympics | ಹಾಕಿ: ಬಲಿಷ್ಠ ಆಸೀಸ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

ಅಕ್ಷರ ಗಾತ್ರ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ ಪುರುಷರ ಹಾಕಿ ವಿಭಾಗದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು ಹೀನಾಯ ಸೋಲಿನ ಆಘಾತಕ್ಕೊಳಗಾಗಿದೆ.

ಭಾನುವಾರ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ಭಾರತ ವಿರುದ್ಧ 1-7 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ ಆಸೀಸ್ ಪಡೆ ತನ್ನ ಸಾಮರ್ಥ್ಯವನ್ನು ದಾಖಲಿಸಿತು. ಭಾರತದ ಪರ ದಿಲ್‌ಪ್ರೀತ್ ಸಿಂಗ್ ಸಮಾಧಾನಕರ ಗೋಲು ದಾಖಲಿಸಿದರು.

ಪಂದ್ಯದ ಆರಂಭದಿಂದಲೂ ಆಸೀಸ್ ಪ್ರಾಬಲ್ಯ ಮೆರೆದಿತ್ತು. ಅಲ್ಲದೆ ಮೊದಲ ಕ್ವಾರ್ಟರ್ ವೇಳೆಗೆ 1-0 ಮತ್ತು ಮೊದಲಾರ್ಧದಲ್ಲಿ 4-0 ಗೋಲುಗಳ ಅಂತರದ ಮುನ್ನಡೆ ಸಾಧಿಸಿತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಗೋಲು ದಾಖಲಿಸಿ ತಿರುಗೇಟು ನೀಡಿದರೂ ಆಗಲೇ ಪರಿಸ್ಥಿತಿ ಕೈಮೀರಿ ಹೋಗಿತ್ತು.

ಮೊದಲಾರ್ಧದಲ್ಲಿ ಸಾಕಷ್ಟು ಗೋಲುಗಳನ್ನು ಬಿಟ್ಟುಕೊಟ್ಟ ಭಾರತ ಕೊನೆಯ ಹಂತದಲ್ಲಿ ತಿರುಗೇಟು ನೀಡುವ ಪ್ರಯತ್ನಕ್ಕೆ ಯಶಸ್ಸು ದಕ್ಕಲಿಲ್ಲ. ಪರಿಣಾಮ ಅಂತಿಮವಾಗಿ 7-1 ಗೋಲುಗಳ ಅಂತರದಲ್ಲಿ ಸೋಲೊಪ್ಪಿಕೊಳ್ಳಬೇಕಾಯಿತು.

ಕಳೆದ ಪಂದ್ಯದಲ್ಲಿ ಅದ್ಭುತ ರಕ್ಷಣೆ ಮಾಡುವ ಮೂಲಕ ಶ್ರೀರಕ್ಷೆಯಾಗಿದ್ದ ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್ ಅವರಿಗೂ ಹೆಚ್ಚೇನು ಮಾಡಲಾಗಲಿಲ್ಲ.

ಇದರೊಂದಿಗೆ ಇದುವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ತಲಾ ಒಂದು ಗೆಲುವು ಹಾಗೂ ಸೋಲನ್ನು ದಾಖಲಿಸಿರುವ ಭಾರತದ ಕ್ವಾರ್ಟರ್ ಫೈನಲ್ ಆಸೆ ಜೀವಂತವಾಗಿದೆ. ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 3–2 ಗೋಲುಗಳ ಅಂತರದ ಗೆಲುವು ಸಾಧಿಸಿತು. ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಗಳಿಸಿ ಮಿಂಚಿದ್ದರು.

ಪುರುಷರ ಹಾಕಿ ವಿಭಾಗವನ್ನು ತಲಾ ಆರು ತಂಡಗಳಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎರಡೂ ಗುಂಪಿನಲ್ಲಿ ಅಗ್ರ ನಾಲ್ಕು ಸ್ಥಾನಗಳನ್ನು ಪಡೆಯುವ ತಂಡಗಳು ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಲಿದೆ. 'ಎ' ಗುಂಪಿನಲ್ಲಿ ಭಾರತ ಹೊರತಾಗಿ ಆಸ್ಟ್ರೇಲಿಯಾ, ಅರ್ಜೇಂಟೀನಾ, ಸ್ಪೇನ್, ನ್ಯೂಜಿಲೆಂಡ್ ಹಾಗೂ ಆತಿಥೇಯ ಜಪಾನ್ ತಂಡಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT