ಬುಧವಾರ, ಸೆಪ್ಟೆಂಬರ್ 29, 2021
20 °C
ರಷ್ಯಾದ ಕ್ಸೆನಿಯಾ ಪೆರೋವಾ ವಿರುದ್ಧ ಜಯ

Tokyo Olympics: ಆರ್ಚರಿ; ಕ್ವಾರ್ಟರ್‌ಫೈನಲ್‌ ತಲುಪಿದ ದೀಪಿಕಾ ಕುಮಾರಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಟೊಕಿಯೊ: ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ವಿಭಾಗದ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ದೀಪಿಕಾ ಕುಮಾರಿ ಕ್ವಾರ್ಟರ್‌ಫೈನಲ್‌ ತಲುಪಿದ್ದಾರೆ.

2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದ ರಷ್ಯಾದ ಕ್ಸೆನಿಯಾ ಪೆರೋವಾ ಅವರನ್ನು ದೀಪಿಕಾ 6-5 ಅಂತರದಿಂದ ಪರಾಭವ ಗೊಳಿಸಿದರು.

ಕ್ವಾರ್ಟರ್‌ಫೈನಲ್‌ ಸೆಣಸಾಟ ಇಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ.

ಶೂಟಿಂಗ್; ಫೈನಲ್‌ ತಲುಪಲು ವಿಫಲವಾದ ಮನು, ರಾಹಿ
ಭಾರತದ ಶೂಟರ್‌ಗಳಾದ ಮನು ಭಾಕರ್‌ ಮತ್ತು ರಾಹಿ ಸರನೊಬತ್‌ ಅವರು ಮಹಿಳೆಯರ 25 ಮೀ ಶೂಟಿಂಗ್ ಸ್ಪರ್ಧೆಯಲ್ಲಿ ಫೈನಲ್‌ ತಲುಪಲು ವಿಫಲರಾದರು.

ಮನು 582 ಪಾಯಿಂಟ್ಸ್ ಮತ್ತು ರಾಹಿ  573 ಪಾಯಿಂಟ್ಸ್ ಗಳಿಸಿದರಾದರೂ, ಫೈನಲ್‌ ಪ್ರವೇಶಿಸಲು ಸಾಧ್ಯವಾಗಲಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು