ಸೋಮವಾರ, ಸೆಪ್ಟೆಂಬರ್ 20, 2021
23 °C

ವಿಶ್ವ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ ನೀರಜ್ ಚೋಪ್ರಾ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊತ್ತಮೊದಲ ಚಿನ್ನ ಗೆದ್ದುಕೊಟ್ಟ ನೀರಜ್ ಚೋಪ್ರಾ, ಪುರುಷರ ಜಾವೆಲಿನ್ ಥ್ರೋ ವಿಶ್ವ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ರ‍್ಯಾಂಕಿಂಗ್ಸ್‌ ಪ್ರಕಾರ ಜರ್ಮನಿಯ ಜೊಹಾನ್ಸ್ ವೆಟರ್, 1396 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ನೀರಜ್ ಸ್ಕೋರ್ 1315 ಆಗಿದೆ.

ಇದನ್ನೂ ಓದಿ: 

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಗರಿಷ್ಠ 87.58 ಮೀಟರ್ ದೂರ ಜಾವೆಲಿನ್ ಎಸೆದಿರುವ ನೀರಜ್ ಚೋಪ್ರಾ, ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದರು. 23 ವರ್ಷದ ನೀರಜ್ ಚೋಪ್ರಾ, ಒಲಿಂಪಿಕ್ಸ್‌ನ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದ ಭಾರತದ ಎರಡನೇ ಕ್ರೀಡಾಪಟು ಎನಿಸಿಕೊಂಡಿದ್ದರು.

 

 

 

ಇನ್ನೊಂದೆಡೆ ವೆಟರ್‌ಗೆ ಫೈನಲ್‌ನಲ್ಲಿ ಕನಿಷ್ಠ ಅಂತಿಮ ಎಂಟರ ಘಟ್ಟಕ್ಕೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಒಂಬತ್ತನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

 

ನೀರಜ್ ಸಾಧನೆಯು ಟೋಕಿಯೊ ಒಲಿಂಪಿಕ್ಸ್‌ನ ಟ್ರ್ಯಾಕ್‌ ಮತ್ತು ಫೀಲ್ಡ್‌ನ ಗಮನಾರ್ಹ ಘಟನೆಗಳಲ್ಲಿ ಒಂದಾಗಿ ದಾಖಲಾಗಿದೆ. ವರ್ಲ್ಡ್‌ ಅಥ್ಲೆಟಿಕ್ಸ್‌ (ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಷನ್‌) ಇದನ್ನು ಅಗ್ರ 10 ‘ಮಾಂತ್ರಿಕ ಕ್ಷಣ’ಗಳಲ್ಲಿ ಒಂದು ಎಂದು ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು