ಮಂಗಳವಾರ, ಸೆಪ್ಟೆಂಬರ್ 21, 2021
21 °C

Tokyo Olympics | ಸೆಮಿಫೈನಲ್‌ನಲ್ಲಿ ಹೋರಾಡಿ ಸೋತ ಭಾರತದ ಮಹಿಳಾ ಹಾಕಿ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು ಅನುಭವಿಸಿದೆ. ಇದರೊಂದಿಗೆ ಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲವಾಗಿದೆ. 

ಇದೇ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯ ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ಬರೆದಿರುವ ಮಹಿಳಾ ತಂಡಕ್ಕೀಗ ಮಗದೊಂದು ಅವಕಾಶವಿದ್ದು, ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ. 

ಇದನ್ನೂ ಓದಿ: 

ಕ್ವಾರ್ಟರ್‌ಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿದ್ದ ರಾಣಿ ರಾಂಪಾಲ್ ಪಡೆಯು ಪದಕ ಸುತ್ತಿಗೆ ಪ್ರವೇಶಿಸಲಿದೆ ಎಂದೇ ಅಂದಾಜಿಸಲಾಗಿತ್ತು. ಇದಕ್ಕೆ ತಕ್ಕಂತೆ ಅರ್ಜೆಂಟೀನಾ ವಿರುದ್ಧದ ಸೆಮಿಫೈನಲ್ ಪಂದ್ಯದ ಎರಡನೇ ನಿಮಿಷದಲ್ಲಿ ಗುರ್ಜಿತ್ ಕೌರ್ ಗೋಲು ದಾಖಲಿಸಿದ್ದರು. ಅಲ್ಲದೆ ಪಂದ್ಯದುದ್ಧಕ್ಕೂ ಅಮೋಘ ಆಟದ ಪ್ರದರ್ಶನ ನೀಡಿದ್ದರು. 

ಆದರೆ ಭಾರತದ ಮಹಿಳಾ ಪಡೆಯ ಸವಾಲುಗಳಿಗೆ ಸ್ಪಷ್ಟ ಉತ್ತರ ನೀಡಿದ ಅರ್ಜೆಂಟೀನಾ ಮೇಲುಗೈ ಸಾಧಿಸಿತ್ತು. ಮಾರಿಯಾ ಬ್ಯಾರಿಯೊನ್ಯುವೊ ಪಂದ್ಯದ 18ನೇ ಹಾಗೂ 36ನೇ ನಿಮಿಷದಲ್ಲಿ ಗೋಲು ದಾಖಲಿಸಿ ಗೆಲುವಿನ ರೂವಾರಿಯೆನಿಸಿದರು. 

ಇದರೊಂದಿಗೆ ಪುರುಷ ತಂಡದ ಬೆನ್ನಲ್ಲೇ ಮಹಿಳಾ ತಂಡವು ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿದೆ. ಆದರೂ ಕಂಚಿನ ಪದಕಕ್ಕಾಗಿ ಹೋರಾಡಲಿದೆ. ಈ ಹಿಂದೆ 1980ರಲ್ಲಿ ಭಾರತ ಮಹಿಳಾ ಬಳಗವು ಆರು ತಂಡಗಳ ಪೈಕಿ ನಾಲ್ಕನೇ ಸ್ಥಾನ ಪಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು