Tokyo Olympics | ಪ್ರಿ-ಕ್ವಾರ್ಟರ್‌ಗೆ ಪ್ರವೇಶಿಸಿದ ಮೇರಿ ಕೋಮ್

ಟೋಕಿಯೊ: ಆರು ಬಾರಿಯ ವಿಶ್ವ ಚಾಂಪಿಯನ್ ಭಾರತದ ಹೆಮ್ಮೆಯ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್‌ನಲ್ಲಿ ಪ್ರಿ-ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ.
ಭಾನುವಾರ ನಡೆದ ಮಹಿಳೆಯರ 51 ಕೆ.ಜಿ ವಿಭಾಗದಲ್ಲಿ ನಡೆದ ರೌಂಡ್ 32ರ ಹಂತದ ಪಂದ್ಯದಲ್ಲಿ ಮೇರಿ ಕೋಮ್ ಅವರು ಡೊಮಿನಿಕಾದ ಮಿಗುಲಿನಾ ಹೆರ್ನಾಂಡೆಜ್ ವಿರುದ್ಧ ಗೆಲುವು ದಾಖಲಿಸಿ ಮಿಂಚಿದರು.
ಇದನ್ನೂ ಓದಿ: Tokyo Olympics: ಭಾರತದ ಏಕೈಕ ಜಿಮ್ನಾಸ್ಟ್ ಸ್ಪರ್ಧಿ ಪ್ರಣತಿಗಿಲ್ಲ ಫೈನಲ್ ಅರ್ಹತೆ
ಟೋಕಿಯೊ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜಧಾರಿಯಾಗಿದ್ದ ಮೇರಿ ಕೋಮ್, ಭಾರತದ ಭರವಸೆಯಾಗಿದ್ದಾರೆ.
GO MARY!!!
The ageless @MangteC registers an opening-round win against Dominican Republic's Miguelina Hernandez in her boxing round of 32 match!
All the power to her 🥊#boxing #Tokyo2020 #Cheer4India pic.twitter.com/Td3OF6kLLE— SAIMedia (@Media_SAI) July 25, 2021
2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಮೇರಿ ಕೋಮ್, ಬಹುತೇಕ ತಮ್ಮ ಕೊನೆಯ ಮಹಾಕ್ರೀಡಾಕೂಟದಲ್ಲಿ ಮತ್ತೊಮ್ಮೆ ಮ್ಯಾಜಿಕ್ ಮಾಡುವ ಇರಾದೆಯಲ್ಲಿದ್ದಾರೆ.
ಮೂರು ಮಕ್ಕಳ ತಾಯಿಯೂ ಆಗಿರುವ 38 ವರ್ಷದ ಮೇರಿ, ದೇಶದ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.