ಶನಿವಾರ, ಸೆಪ್ಟೆಂಬರ್ 25, 2021
27 °C
ಬ್ಯಾಡ್ಮಿಂಟನ್‌

Paralympics: ದಾಖಲೆಯ ಹೊಸ್ತಿಲಲ್ಲಿ ಕನ್ನಡಿಗ ಸುಹಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾನುವಾರ ಬೆಳಿಗ್ಗೆ ನಡೆಯುವ ಪುರುಷರ ಬ್ಯಾಡ್ಮಿಂಟನ್‌ (ಎಸ್‌ಎಲ್‌–4) ಫೈನಲ್‌ನಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಕಣಕ್ಕೆ ಇಳಿಯುವುದರೊಂದಿಗೆ ದಾಖಲೆ ಬರೆಯಲಿದ್ದಾರೆ. ಈ ಹಣಾಹಣಿಯಲ್ಲಿ ಸುಹಾಸ್ ಗೆದ್ದರೂ ಸೋತರೂ ಪದಕವಂತೂ ಖಚಿತ. ಈ ಮೂಲಕ, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭಾರತದ ಮೊದಲ ಅಧಿಕಾರಿ ಎಂಬ ಶ್ರೇಯಸ್ಸು ಅವರದಾಗಲಿದೆ. 

ಹಾಸನದಲ್ಲಿ ಜನಿಸಿ ಶಿವಮೊಗ್ಗದಲ್ಲಿ ಬೆಳೆದ ಸುಹಾಸ್ ದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿರುವ ಎನ್‌ಐಟಿಯಲ್ಲಿ ಕಂಪ್ಯೂಟರ್‌ ಎಂಜಿನಿಯರಿಂಗ್ ಮಾಡಿದ್ದಾರೆ. ಈಗ ಉತ್ತರಪ್ರದೇಶದಲ್ಲಿ ಐಎಎಸ್ ಅಧಿಕಾರಿ. ಮಥುರಾದ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಅವರು ಆರು ಜಿಲ್ಲೆಗಳ ಡಿಎಂ (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್‌) ಆಗಿ ಸೇವೆ ಸಲ್ಲಿಸಿದ ನಂತರ ಈಗ ಗೌತಮ ಬುದ್ಧ ನಗರ ಜಿಲ್ಲೆಯ ದಂಡಾಧಿಕಾರಿ. ‌

2016ರಲ್ಲಿ ಚೀನಾದ ಬೀಜಿಂಗ್‌ನಲ್ಲಿ ನಡೆದ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ಸುಹಾಸ್ ಯತಿರಾಜ್ ಸೇವೆಯಲ್ಲಿರುವಾಗ ಅಂತರರಾಷ್ಟ್ರೀಯ ಕ್ರೀಡಾಕೂಟವೊಂದರಲ್ಲಿ ಪದಕ ಗಳಿಸಿದ ಭಾರತದ ಮೊದಲ ಐಎಎಸ್ ಅಧಿಕಾರಿ
ಎನಿಸಿಕೊಂಡಿದ್ದರು. ಎರಡು ವರ್ಷಗಳ ನಂತರ ವಾರಾಣಸಿಯಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲೂ ಚಿನ್ನ ಗಳಿಸಿದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಹಿಂದೆ ಒಟ್ಟು ನಾಲ್ಕು ಚಿನ್ನ, ಐದು ಬೆಳ್ಳಿ, ಎಂಟು ಕಂಚಿನ ಪದಕಗಳನ್ನು
ಗೆದ್ದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು