ಹೈದರಾಬಾದ್: ಕೋವಿಡ್‌ನಿಂದಾಗಿ ಲಭಿಸಿರುವ ವಿರಾಮದಿಂದ ವೈಯಕ್ತಿಕ ವಾಗಿ ತಮಗೆ ಅನುಕೂಲ ಆಗಿದ್ದು ತಂತ್ರಗಾರಿಕೆ ಮತ್ತು ನೈಪುಣ್ಯ ಹೆಚ್ಚಿಸಲು ನೆರವಾಗಿದೆ ಎಂದು ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಹೇಳಿದ್ದಾರೆ.
ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸಿಂಧು ಅವರ ಅಭ್ಯಾಸಕ್ಕೆ ಕೊರೊನಾ ಅಡ್ಡಿಯಾಗಿತ್ತು. ಒಂದು ವರ್ಷದಿಂದ ಅವರಿಗೆ ಯಾವ ಟೂರ್ನಿಯಲ್ಲೂ ಆಡಲು ಸಾಧ್ಯವಾಗಲಿಲ್ಲ. ಆದರೆ ಈ ಅವಧಿ ತಮ್ಮ ಪಾಲಿಗೆ ಅದೃಷ್ಟವಾಗಿ ಪರಿಣಮಿಸಿದೆ ಎಂದು ಸಿಂಧು ಹೇಳಿದರು.
‘ಸಾಮಾನ್ಯವಾಗಿ ಅಭ್ಯಾಸ ಮಾಡಲು ಅವಕಾಶ ಸಿಗುವುದು ಕಡಿಮೆ. ಆ ಹಿನ್ನೆಲೆಯಲ್ಲಿ ನೋಡಿದರೆ ಇದೇ ಮೊದಲ ಬಾರಿ ಅಭ್ಯಾಸಕ್ಕೆ ಸಾಕಷ್ಟು ಸಮಯ ಸಿಕ್ಕಿದೆ. ಒಲಿಂಪಿಕ್ಸ್‌ಗೆ ಸಿದ್ಧವಾಗಲು ಇದು ನೆರವಾಗಿದೆ. ಕೋವಿಡ್‌ನಿಂದಾಗಿ ಒಲಿಂಪಿಕ್ಸ್ ಸಿದ್ಧತೆಗೆ ಯಾವ ರೀತಿಯಲ್ಲೂ ತೊಂದರೆಯಾಗಲಿಲ್ಲ’ ಎಂದು ಅವರು ವಿವರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.