ಬುಧವಾರ, ಸೆಪ್ಟೆಂಬರ್ 22, 2021
22 °C

Tokyo Olympics ಈಜು | ಸೆಮಿಫೈನಲ್‌‌ಗೆ ಪ್ರವೇಶಿಸುವಲ್ಲಿ ಸಜನ್ ಪ್ರಕಾಶ್ ವಿಫಲ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಟೋಕಿಯೊ: ಭಾರತದ ಭರವಸೆಯ ಈಜುಪಟು ಸಜನ್ ಪ್ರಕಾಶ್, ಪ್ರತಿಷ್ಠಿತ ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ.

ಸೋಮವಾರ ನಡೆದ ಪುರುಷರ 200 ಮೀಟರ್ ಬಟರ್‌ಫ್ಲೈ ಹೀಟ್ 2ರಲ್ಲಿ ಸಜನ್, ನಾಲ್ಕನೇಯವರಾಗಿ ಈಜಿ ದಡ ಸೇರಿದರು.

ಇದನ್ನೂ ಓದಿ: 

 

 

200 ಮೀಟರ್ ಬಟರ್‌ಫ್ಲೈ ವಿಭಾಗದಲ್ಲಿ ಒಂದು ನಿಮಿಷ 57.22 ಸೆಕೆಂಡುಗಳಲ್ಲಿ ಸಜನ್ ಗುರಿ ಮುಟ್ಟಿದರು. ಈ ಮೂಲಕ 38 ಸ್ಪರ್ಧಿಗಳ ಪೈಕಿ ಒಟ್ಟಾರೆಯಾಗಿ 24ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

 

ಅಲ್ಲದೆ ಸೆಮಿಫೈನಲ್‌ ಹಂತಕ್ಕೆ ಪ್ರವೇಶಿಸುವ ಅವಕಾಶದಿಂದ ವಂಚಿತರಾದರು. ಅಗ್ರ 16 ಈಜುಪಟುಗಳು ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸಿದ್ದಾರೆ.

ಕಳೆದ ತಿಂಗಳು ಇಟಲಿಯಲ್ಲಿ ನಡೆದ ಅರ್ಹತಾ ಸ್ಪರ್ದೆಯಲ್ಲಿ ಒಂದು ನಿಮಿಷ 56.38 ಸೆಕೆಂಡುಗಳಲ್ಲಿ ಕ್ರಮಿಸಿದ ಸಜನ್ ತಮ್ಮ ವೈಯಕ್ತಿಕ ಶ್ರೇಷ್ಠ ಸಾಧನೆಯನ್ನು ಸರಿಗಟ್ಟುವಲ್ಲಿ ವಿಫಲರಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು